ಗಣರಾಜ್ಯೋತ್ಸವ: ಕ್ರೀಡಾ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ; ಅರ್ಜಿ ಆಹ್ವಾನ
ಧಾರವಾಡ: ಮುಂಬರುವ ಜನವರಿ 26, 2026 ರಂದು ಜರುಗಲಿರುವ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ, ಕ್ರೀಡೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಸಾಧಕರನ್ನು ಸನ್ಮಾನಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅರ್ಜಿ ಆಹ್ವಾನಿಸಿದೆ. 2025 ನೇ ಸಾಲಿನಲ್ಲಿ (ದಿನಾಂಕ: 01-01-2025 ರಿಂದ 31-12-2025 ರ ವರೆಗೆ) ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ವಿಜೇತರಾದವರು ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಮತ್ತು ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಸಾಧಕರು ಈ ಸನ್ಮಾನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ….

