ತಾಂತ್ರಿಕ ಜ್ಞಾನದ ಕೊರತೆಯಿಂದ ಹೆಚ್ಚಿದ ಸೈಬರ್ ವಂಚನೆ: ಅಕ್ಷರಸ್ಥರೇ ಹೆಚ್ಚು ಮೋಸ ಹೋಗುತ್ತಾರೆ; ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ: ಪ್ರಸ್ತುತ ದಿನಗಳಲ್ಲಿ ಸಾರ್ವಜನಿಕರು ಮಾತ್ರವಲ್ಲದೆ ಸರ್ಕಾರಿ ನೌಕರರು ಕೂಡ ತಂತ್ರಜ್ಞಾನದ ಬಗ್ಗೆ ಹೆಚ್ಚಿನ ಮಾಹಿತಿ ಹೊಂದಿಲ್ಲ. ಈ ಕಾರಣಕ್ಕಾಗಿಯೇ ಸೈಬರ್ ವಂಚನೆಗಳು ದಿನೇದಿನೇ ಹೆಚ್ಚಾಗುತ್ತಿವೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅಕ್ಷರಸ್ಥರೇ ಹೆಚ್ಚು ಮೋಸ ಹೋಗುತ್ತಿದ್ದು, ತಾಂತ್ರಿಕ ಜ್ಞಾನ ಮತ್ತು ಮೊಬೈಲ್ ಬಳಕೆ ಬಗ್ಗೆ ಸಾಮಾನ್ಯ ತಿಳುವಳಿಕೆ ಅತ್ಯಗತ್ಯ ಎಂದು ಅವರು ಅಭಿಪ್ರಾಯಪಟ್ಟರು. ಅವರು ಮಂಗಳವಾರದಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಸರ್ಕಾರಿ ನೌಕರರಿಗಾಗಿ ಆಯೋಜಿಸಿದ್ದ ಆರ್ಥಿಕ…

