ಕುಂದಗೋಳ: ಕಡಲೆ ಖರೀದಿ ಕೇಂದ್ರ ಆರಂಭಿಸಿ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ತಹಶೀಲ್ದಾರ ರಾಜು ಮಾವರಕರಿಗೆ ರೈತರ ಮನವಿ
ಕುಂದಗೋಳ: ತಾಲೂಕಿನಾದ್ಯಂತ ಸತತ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕು. ಕಡಲೆ ಬೆಳೆಗೆ ಬೆಂಬಲ ಬೆಲೆ ನಿಗದಿಪಡಿಸಿ ತಕ್ಷಣವೇ ಎಂ.ಎಸ್.ಪಿ (MSP) ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿ ಕುಂದಗೋಳ ಬೆಳೆ ರಕ್ಷಕ ರೈತ ಸಂಘದ ವತಿಯಿಂದ ತಹಶೀಲ್ದಾರ್ ರಾಜು ಮಾವರಕರ ಅವರಿಗೆ ಮನವಿ ಸಲ್ಲಿಸಲಾಯಿತು. ಕಳೆದ 4–5 ವರ್ಷಗಳಿಂದ ಪ್ರಕೃತಿ ವಿಕೋಪ ಹಾಗೂ ಅತಿವೃಷ್ಟಿಯಿಂದ ತಾಲೂಕಿನ ರೈತರು ತತ್ತರಿಸಿ ಹೋಗಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಬಿತ್ತನೆ, ಗೊಬ್ಬರ ಹಾಗೂ ಕ್ರಿಮಿನಾಶಕಕ್ಕಾಗಿ ಸಾಲಸೋಲ ಮಾಡಿ…

