ಸಂಚಾರಿ ನಿಯಮ ಉಲ್ಲಂಘನೆ ದಂಡದಲ್ಲಿ ಶೇ. 50 ರಿಯಾಯಿತಿ ಸೌಲಭ್ಯ ಬಳಸಿಕೊಳ್ಳಿ: ಅಪರ ಸಾರಿಗೆ ಆಯುಕ್ತ ಕೆ. ಟಿ. ಹಾಲಸ್ವಾಮಿ

. 12 ರವರೆಗೆ ಅವಕಾಶ; ಬಾಕಿ ಇರುವ ಪ್ರಕರಣ ಇತ್ಯರ್ಥಕ್ಕೆ ಸಾರ್ವಜನಿಕರಿಗೆ ಮನವಿ ​ಧಾರವಾಡ: ನವೆಂಬರ್ 26: ವಿವಿಧ ರೀತಿಯ ಸಂಚಾರ ವಾಹನಗಳ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ವಿಧಿಸಿದ ದಂಡದ ಮೊತ್ತದಲ್ಲಿ ರಾಜ್ಯ ಸರ್ಕಾರವು ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕರು, ವಿಶೇಷವಾಗಿ ಸಂಚಾರ ನಿಯಮ ಉಲ್ಲಂಘನೆ ಮಾಡಿರುವವರು ಈ ಅವಕಾಶವನ್ನು ಬಳಸಿಕೊಂಡು ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ಗಳಲ್ಲಿನ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಅಪರ ಸಾರಿಗೆ ಆಯುಕ್ತ ಕೆ. ಟಿ. ಹಾಲಸ್ವಾಮಿ ಅವರು…

Read More

ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವೇ ನಮ್ಮ ಸಂವಿಧಾನದ ಅಡಿಪಾಯ: ಸಭಾಪತಿ ಬಸವರಾಜ ಹೊರಟ್ಟಿ

ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಕರೆ; ಸಂವಿಧಾನ ನಮ್ಮ ದೇಶದ ಆತ್ಮ, ಪ್ರತಿಯೊಬ್ಬ ಪ್ರಜೆಯೂ ಅರಿತುಕೊಳ್ಳಬೇಕು ​ಧಾರವಾಡ: ನವೆಂಬರ್ 26: ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಲಿಖಿತ ಸಂವಿಧಾನ ನಮ್ಮದಾಗಿದ್ದು, ಅದು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ತಳಹದಿಯ ಮೇಲೆ ರಚನೆಯಾಗಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು. ​ಅವರು ಬುದುವಾರದಂದು (ನ.26) ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ…

Read More

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 42 ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಡಿಸೆಂಬರ್ 2 ಮತ್ತು 3 ರಂದು ನೇರ ಸಂದರ್ಶನ; ಕಂಪ್ಯೂಟರ್ ಸಾಕ್ಷರತಾ ಪ್ರಮಾಣಪತ್ರ ಕಡ್ಡಾಯ ​ಧಾರವಾಡ: ನವೆಂಬರ್ 26: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಯೋಜನೆಯಡಿ ವಿವಿಧ ಕಾರ್ಯಕ್ರಮಗಳಡಿಯಲ್ಲಿ ಖಾಲಿ ಉಳಿದಿರುವ ಮತ್ತು 2025-26 ನೇ ಸಾಲಿನ ಆರ್.ಓ.ಪಿ. (ROP) ಯಲ್ಲಿ ಅನುಮೋದನೆಯಾಗಿರುವ ಒಟ್ಟು 42 ತಾತ್ಕಾಲಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ​ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ರಾಷ್ಟ್ರೀಯ ಆರೋಗ್ಯ ಅಭಿಯಾನದ…

Read More

ತಾಲ್ಲೂಕಾ ಯೋಜನಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ: ನೇರ ಗುತ್ತಿಗೆ ಆಧಾರದ ಮೇಲೆ ಭರ್ತಿ

​ಹುಬ್ಬಳ್ಳಿ-ಧಾರವಾಡ (ಶಹರ) ಕಚೇರಿಗೆ ನೇಮಕಾತಿ; ಡಿ. 12 ರೊಳಗೆ ಅರ್ಜಿ ಸಲ್ಲಿಕೆಗೆ ಅವಕಾಶ ​ಧಾರವಾಡ: ನವೆಂಬರ್ 26: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಹುಬ್ಬಳ್ಳಿ-ಧಾರವಾಡ (ಶಹರ) ದಲ್ಲಿ ತೆರವಾದ ತಾಲ್ಲೂಕಾ ಯೋಜನಾ ಸಂಯೋಜಕರ ಹುದ್ದೆಯನ್ನು ನೇರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ​ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಹಾಗೂ ಧಾರವಾಡ ಜಿಲ್ಲಾಧಿಕಾರಿಗಳ ಅನುಮೋದನೆಯಂತೆ ಈ ನೇಮಕಾತಿ ಪ್ರಕ್ರಿಯೆ…

Read More

ತಾಲ್ಲೂಕಾ ಯೋಜನಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ: ನೇರ ಗುತ್ತಿಗೆ ಆಧಾರದ ಮೇಲೆ ಭರ್ತಿ

ಹುಬ್ಬಳ್ಳಿ-ಧಾರವಾಡ (ಶಹರ) ಕಚೇರಿಗೆ ನೇಮಕಾತಿ; ಡಿ. 12 ರೊಳಗೆ ಅರ್ಜಿ ಸಲ್ಲಿಕೆಗೆ ಅವಕಾಶ ​ಧಾರವಾಡ: ನವೆಂಬರ್ 26: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಹುಬ್ಬಳ್ಳಿ-ಧಾರವಾಡ (ಶಹರ) ದಲ್ಲಿ ತೆರವಾದ ತಾಲ್ಲೂಕಾ ಯೋಜನಾ ಸಂಯೋಜಕರ ಹುದ್ದೆಯನ್ನು ನೇರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ​ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಹಾಗೂ ಧಾರವಾಡ ಜಿಲ್ಲಾಧಿಕಾರಿಗಳ ಅನುಮೋದನೆಯಂತೆ ಈ ನೇಮಕಾತಿ ಪ್ರಕ್ರಿಯೆ…

Read More

ಒಂದು ತಿಂಗಳೊಳಗೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆಕುಂದಗೋಳ ಶ್ರೀಶಿಥಿಕಂಠೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಭವಿಷ್ಯ​

​ಕುಂದಗೋಳ: ನವೆಂಬರ್ 26: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ನಡೆಯುತ್ತಿರುವ ಗೊಂದಲಗಳ ಕುರಿತು ಕುಂದಗೋಳ ಪಟ್ಟಣದ ಹಿರೇಮಠದ ಶಿತಿಕಂಠೇಶ್ವರ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಸುಮಾರು 20 ವರ್ಷಗಳಿಗೂ ಹೆಚ್ಚು ಕಾಲ ಜ್ಯೋತಿಷ್ಯದಲ್ಲಿ ಅಧ್ಯಯನಶೀಲರಾಗಿರುವ ಮತ್ತು ಜ್ಯೋತಿಷ್ಯ ಅಧ್ಯಯನ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿರುವ ಶ್ರೀಗಳು, ತಮ್ಮ ಅನುಭವದ ಆಧಾರದ ಮೇಲೆ ಡಿ.ಕೆ. ಶಿವಕುಮಾರ್ ಅವರ ಕುಂಡಲಿಯನ್ನು ಅಭ್ಯಾಸಿಸಿ ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ​ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, 15-01-1961 ರಂದು…

Read More

ಪಬ್ಲಿಕ್ ಸಮಾಚಾರ ವರದಿ ಪರಿಣಾಮ: ಕುಂದಗೋಳ ಹಾಸ್ಟೆಲ್‌ಗೆ ಅಧಿಕಾರಿಗಳ ದಂಡು, ಮಕ್ಕಳ ಆರೋಗ್ಯ ತಪಾಸಣೆ ಆರಂಭ!

​ರೋಗದ ಸಾಮ್ರಾಜ್ಯ ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತ; ನೂತನ ಹಾಸ್ಟೆಲ್ ಕಟ್ಟಡ ಶೀಘ್ರ ಪೂರ್ಣಗೊಳಿಸಲು ಎಲ್.ಟಿ. ಕಂಪನಿಗೆ ತಹಶೀಲ್ದಾರ್ ತಾಕೀತು ​ಕುಂದಗೋಳ: ನವೆಂಬರ್ 26: ಪಟ್ಟಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿನ ಭೀಕರ ಅವ್ಯವಸ್ಥೆ, ಕಲುಷಿತ ನೀರಿನ ಪೂರೈಕೆ ಮತ್ತು ಸುಮಾರು 20 ವಿದ್ಯಾರ್ಥಿಗಳಿಗೆ ತಗುಲಿದ್ದ ಚರ್ಮರೋಗದ ಕುರಿತು ‘ಪಬ್ಲಿಕ್ ಸಮಾಚಾರ’ ವೆಬ್ ವಾಹಿನಿಯು “ಕುಂದಗೋಳ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿದೆ ರೋಗದ ಸಾಮ್ರಾಜ್ಯ” ಎಂಬ ಶೀರ್ಷಿಕೆಯಡಿ ಪ್ರಕಟಿಸಿದ ವರದಿಗೆ ತಕ್ಷಣ ಸ್ಪಂದನೆ ದೊರೆತಿದೆ. ವರದಿ ಪ್ರಕಟವಾದ…

Read More

ದೌರ್ಜನ್ಯದ ವಿರುದ್ಧ ಮಹಿಳೆಯರು ಧ್ವನಿ ಎತ್ತಬೇಕು: ನ್ಯಾಯಾಧೀಶರಾದ ಅಬ್ದುಲ್ ಖಾದರ್ ಕರೆ

ಕುಂದಗೋಳದಲ್ಲಿ ಮಹಿಳಾ ದೌರ್ಜನ್ಯ ನಿರ್ಮೂಲನೆ ದಿನಾಚರಣೆ; ಕಾನೂನುಗಳ ಸಮರ್ಪಕ ಬಳಕೆ ಆಗದಿರುವ ಬಗ್ಗೆ ಕಳವಳ ​ಕುಂದಗೋಳ: ನವೆಂಬರ್ 25: ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಾಗಿ ಹಲವು ಕಾನೂನುಗಳು ಜಾರಿಯಲ್ಲಿದ್ದರೂ, ಅವುಗಳ ಸಮರ್ಪಕ ಬಳಕೆ ಆಗುತ್ತಿಲ್ಲ. ಕಾನೂನುಗಳ ಪರಿಣಾಮಕಾರಿ ಬಳಕೆಗಾಗಿ ಈ ಅಂತಾರಾಷ್ಟ್ರೀಯ ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನೆ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಗೌರವಾನ್ವಿತ ನ್ಯಾಯಾಧೀಶರಾದ ಅಬ್ದುಲ್ ಖಾದರ್ ಅವರು ಹೇಳಿದರು. ​ಕುಂದಗೋಳ ಪಟ್ಟಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಯೋಜನಾಧಿಕಾರಿ ಕಾರ್ಯಾಲಯದಲ್ಲಿ ನಡೆದ ಮಹಿಳಾ…

Read More

ಪಶ್ಚಿಮ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ: ಒಟ್ಟು 74,316 ಮತದಾರರು

ನ. 25 ರಿಂದ ಡಿ. 10 ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ; ವೆಬ್‌ಸೈಟ್‌ನಲ್ಲೂ ಪಟ್ಟಿ ಲಭ್ಯ ​ಧಾರವಾಡ: ನವೆಂಬರ್ 25: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ನವೆಂಬರ್ 25, 2025 ರಂದು ಪ್ರಕಟಿಸಲಾಗಿದೆ. ಪ್ರಕಟಿತ ಪಟ್ಟಿಯಲ್ಲಿ 43,573 ಪುರುಷರು ಮತ್ತು 30,743 ಮಹಿಳೆಯರು ಸೇರಿ ಒಟ್ಟು 74,316 ಮತದಾರರು ಇದ್ದಾರೆ ಎಂದು ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ನೋಂದಣಿ ಅಧಿಕಾರಿಗಳು ಆಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಾನಕಿ…

Read More

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಸಮಿತಿ ರಚನೆ ಕಡ್ಡಾಯ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ

ಜಿಲ್ಲಾ ನ್ಯಾಯಾಲಯದಲ್ಲಿ ಅಂತರರಾಷ್ಟ್ರೀಯ ದಿನಾಚರಣೆ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ ​ಧಾರವಾಡ: ನವೆಂಬರ್ 25: ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನೆಗಾಗಿ ಅಂತರಾಷ್ಟ್ರೀಯ ದಿನದ ಅಂಗವಾಗಿ ಇಂದು (ನ.25) ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಅಭಿಯೋಜನೆ ಇಲಾಖೆ ಸಹಯೋಗದಲ್ಲಿ ಈ ಕಾರ್ಯಕ್ರಮ ಜರುಗಿತು. ​ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ…

Read More