ಹಿರೇನರ್ತಿ ಭಾಗದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶಿರಸ್ತೆದಾರ ಗೆ ಮನವಿ
ಕುಂದಗೋಳ: ತಾಲೂಕಿನ ಹಿರೇನರ್ತಿ, ಬೆನಕನಹಳ್ಳಿ ಹಾಗೂ ಬಸಾಪೂರ ಗ್ರಾಮಗಳಲ್ಲಿ ಕಳೆದ 15 ದಿನಗಳಿಂದ ಮಲಪ್ರಭಾ ಕುಡಿಯುವ ನೀರಿನ ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಸಾರ್ವಜನಿಕರು ಹನಿ ನೀರಿಗೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ತೀವ್ರ ಸಮಸ್ಯೆಯಿಂದ ಗ್ರಾಮಸ್ಥರ ಜೀವನ ಅಸ್ತವ್ಯಸ್ತಗೊಂಡಿದ್ದು, ಆಡಳಿತ ಮಂಡಳಿಯ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಗ್ರಾಮಸ್ಥರು ಸೋಮವಾರ ತಾಲೂಕು ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಪ್ರತಿಭಟನಾಕಾರರು ಶಿರಸ್ತೇದಾರ್ ಮಹೇಶ್ ಶ್ಯಾಮನಾಳ ಅವರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಕಳೆದ ಎರಡು ವಾರಗಳಿಂದ ಕುಡಿಯುವ ನೀರಿಲ್ಲದೆ…

