ಕಲಘಟಗಿ ಅಪಾಯಕಾರಿ ಮರಗಳ ತೆರವಿಗೆ ಫೆಬ್ರವರಿ 27 ಮತ್ತು ಮಾರ್ಚ್ 11 ರಂದು ಬಹಿರಂಗ ಹರಾಜು

ಧಾರವಾಡ: ಕಲಘಟಗಿ ವಲಯದ ವಿವಿಧೆಡೆ ಅಪಾಯಕಾರಿ ಸ್ಥಿತಿಯಲ್ಲಿರುವ ಹಾಗೂ ಕಟ್ಟಡ ನಿರ್ಮಾಣಕ್ಕೆ ಅಡಚಣೆಯಾಗಿರುವ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯು ಫೆಬ್ರವರಿ 27 ಮತ್ತು ಮಾರ್ಚ್ 11, 2026 ರಂದು ಬಹಿರಂಗ ಹರಾಜು ಹಮ್ಮಿಕೊಂಡಿದೆ. ಕಲಘಟಗಿ-ಧಾರವಾಡ ಮುಖ್ಯರಸ್ತೆಯ ಹಿರೇಹೊನ್ನಳ್ಳಿ ಗ್ರಾಮದ ದೂಳಿಕೊಪ್ಪ ಕ್ರಾಸ್ ಹತ್ತಿರ ಇರುವ 3 ಅಪಾಯಕಾರಿ ಮರಗಳು ಹಾಗೂ ಗಂಜಿಗಟ್ಟಿ ಗ್ರಾಮದ ಕಸ್ತೂರಿಬಾ ಗಾಂಧಿ ಬಾಲಿಕಾ ವಸತಿ ವಿದ್ಯಾಲಯದ ಆವರಣದಲ್ಲಿ ನೂತನ ವಸತಿ ನಿಲಯ ನಿರ್ಮಾಣಕ್ಕೆ ಅಡಚಣೆಯಾಗಿರುವ 26 ವಿವಿಧ ಜಾತಿಯ ಮರಗಳು ಸೇರಿದಂತೆ ಒಟ್ಟು…

Read More

ಜಿಲ್ಲಾಮಟ್ಟದ 12ನೇ ಜನತಾ ದರ್ಶನ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

ಧಾರವಾಡ: ನಮಗೆಲ್ಲರಿಗೂ ಇರುವ ಸಂಬಳ ಹಾಗೂ ಸವಲತ್ತುಗಳು ಸಾರ್ವಜನಿಕರ ತೆರಿಗೆಯಿಂದ ಬಂದಿದ್ದು, ಪ್ರತಿಯೊಬ್ಬ ಅಧಿಕಾರಿಯು ತಮ್ಮ ಕೆಲಸವನ್ನು ಮಾನವೀಯತೆ ಮತ್ತು ಆತ್ಮಸಾಕ್ಷಿಯಿಂದ ನಿರ್ವಹಿಸಬೇಕು. ಕರ್ತವ್ಯದಲ್ಲಿ ವಿನಾಕಾರಣ ವಿಳಂಬ, ಆಲಸ್ಯ ಅಥವಾ ಬೇಜವಾಬ್ದಾರಿತನ ತೋರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೂಡಲೇ ಮನೆಗೆ ಹೋಗಬಹುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಕಠಿಣ ಎಚ್ಚರಿಕೆ ನೀಡಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಧಾರವಾಡ ಜಿಲ್ಲಾಡಳಿತವು ಆಯೋಜಿಸಿದ್ದ ಜಿಲ್ಲಾ ಮಟ್ಟದ 12ನೇ ಜನತಾ ದರ್ಶನದಲ್ಲಿ…

Read More

ನವಲಗುಂದ: ಮುಂಬರುವ ಚುನಾವಣೆಗಳನ್ನು ಒಗ್ಗಟ್ಟಿನಿಂದ ಎದುರಿಸಲು ಮಾಜಿ ಸಚಿವ ಕೆ.ಎನ್. ಗಡ್ಡಿ ಕರೆ

ನವಲಗುಂದ: ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಪುರಸಭೆ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ, ಪಕ್ಷದ ಸಂಘಟನೆಗಾಗಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಕೆ.ಎನ್. ಗಡ್ಡಿ ಅವರು ಕರೆ ನೀಡಿದರು. ಪಟ್ಟಣದ ಪ್ರಿಯಾಂಕಾ ಶಾಲೆ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ರಜತ್ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಪಕ್ಷದ ತತ್ವ-ಸಿದ್ಧಾಂತಗಳನ್ನು ಮನೆಮನೆಗೆ ತಲುಪಿಸುವ ಮೂಲಕ ತಳಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸಿದರೆ…

Read More

ಗುಡಿಸಾಗರ ಗ್ರಾಮದಲ್ಲಿ ಶಾಸಕ ಎನ್.ಎಚ್. ಕೋನರಡ್ಡಿ ಅವರ ಜನ್ಮದಿನಾಚರಣೆ: ಸಿಹಿ ಹಂಚಿ ಸಂಭ್ರಮಿಸಿದ ಗ್ರಾಮಸ್ಥರು

ನವಲಗುಂದ: ತಾಲ್ಲೂಕಿನ ಗುಡಿಸಾಗರ ಗ್ರಾಮದಲ್ಲಿ ಭಾನುವಾರ ಶಾಸಕ ಎನ್.ಎಚ್. ಕೋನರಡ್ಡಿ ಅವರ ಹುಟ್ಟುಹಬ್ಬವನ್ನು ಗ್ರಾಮದ ಹಿರಿಯರು ಹಾಗೂ ಅಭಿಮಾನಿಗಳು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಿದರು. ಹಿರೇಮಠದ ಶ್ರೀಗಳ ಸಾನ್ನಿಧ್ಯದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ, ಶಾಸಕರಿಗೆ ಆಯುರಾರೋಗ್ಯ ಮತ್ತು ಹೆಚ್ಚಿನ ಜನಸೇವೆ ಮಾಡುವ ಶಕ್ತಿ ಲಭಿಸಲಿ ಎಂದು ಹಾರೈಸಲಾಯಿತು. ​ಗ್ರಾಮದ ಪ್ರಮುಖರು ಹಾಗೂ ಹಿರಿಯರು ಶಾಸಕರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿ, ಗ್ರಾಮಸ್ಥರಿಗೆ ಸಿಹಿ ಹಂಚುವ ಮೂಲಕ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯರು, ಶಾಸಕ ಕೋನರಡ್ಡಿ ಅವರಿಗೆ ಭಗವಂತನು…

Read More

ನವಲಗುಂದ: ಫೆ. 24ರಿಂದ 26ರವರೆಗೆ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಕಳಸಾರೋಹಣ ಮಹೋತ್ಸವ

ನವಲಗುಂದ: ಪಟ್ಟಣದ ಇತಿಹಾಸ ಪ್ರಸಿದ್ಧ ಹಾಗೂ ಕಲಿಯುಗದ ಕಾಮಧೇನು ಎಂದೇ ಖ್ಯಾತಿ ಪಡೆದಿರುವ ರಾಮಲಿಂಗ ಓಣಿಯ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಕಳಸಾರೋಹಣ, ಯಾತ್ರಿ ನಿವಾಸ, ಟ್ರಸ್ಟ್ ಕಾರ್ಯಾಲಯ ಹಾಗೂ ಭಕ್ತರಿಗಾಗಿ ನಿರ್ಮಿಸಲಾದ ಮನೆಗಳ ಉದ್ಘಾಟನಾ ಸಮಾರಂಭವು ಫೆಬ್ರವರಿ 24ರಿಂದ 26ರ ವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ ಎಂದು ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಯಲ್ಲಪ್ಪ ಭೋವಿ ತಿಳಿಸಿದರು. ​ಭಾನುವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದ ಅವರು, ಫೆಬ್ರವರಿ 24ರಂದು ಬೆಳಿಗ್ಗೆ 8…

Read More

ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ತಲುಪಿಸುವುದೇ ನಮ್ಮ ಆದ್ಯತೆ: ಅರವಿಂದ ಏಗನಗೌಡರ

ಧಾರವಾಡ: ಸರ್ಕಾರದ ಆಶಯದಂತೆ ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಗ್ಯಾರಂಟಿ ಯೋಜನೆಗಳ ಲಾಭ ಯಾವುದೇ ವಿಳಂಬವಿಲ್ಲದೆ ತಲುಪಬೇಕು. ವಿಶೇಷವಾಗಿ ಕುಟುಂಬದ ಜವಾಬ್ದಾರಿ ಹೊತ್ತಿರುವ ಮಹಿಳೆಯರ ಶ್ರಮಕ್ಕೆ ಗೌರವ ನೀಡುವುದು ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ಅಧಿಕಾರಿಗಳು ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಧಾರವಾಡ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರವಿಂದ ಏಗನಗೌಡರ ತಿಳಿಸಿದರು. ​ತಾಲೂಕಿನ ಮರೆವಾಡ ಹಾಗೂ ಕರಡಿಗುಡ್ಡ ಗ್ರಾಮ ಪಂಚಾಯತಿಗಳಲ್ಲಿ ಶನಿವಾರ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ…

Read More

ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಮೇವಿನ ಕೊರತೆ ಆಗದಂತೆ ಮುನ್ನೆಚ್ಚರಿಕೆ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚನೆ

ಧಾರವಾಡ, ಫೆ.21: ರಾಜ್ಯ ಹವಾಮಾನ ಇಲಾಖೆಯು ಮಾರ್ಚ್‌ನಿಂದ ಮೇ ತಿಂಗಳವರೆಗೆ ತೀವ್ರ ಬೇಸಿಗೆ ಉಂಟಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚಿಸಿದರು. ಶನಿವಾರದಂದು (ಫೆ.21) ಮಧ್ಯಾಹ್ನ ಜಿಲ್ಲಾಧಿಕಾರಿಗಳ ನೂತನ ಸಭಾಂಗಣದಲ್ಲಿ 2026ನೇ ಸಾಲಿನ ಬೇಸಿಗೆ ಅವಧಿಗೆ ಸಂಬಂಧಿಸಿದಂತೆ ಕುಡಿಯುವ ನೀರು, ಮೇವಿನ ಸಂಗ್ರಹಣೆ ಹಾಗೂ…

Read More

ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಧಾರವಾಡ ಜಿಲ್ಲೆಯಲ್ಲಿ 26,954 ವಿದ್ಯಾರ್ಥಿಗಳು ಸಜ್ಜು

​ಧಾರವಾಡ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ಜಿಲ್ಲೆಯಾದ್ಯಂತ ನಡೆಯಲಿದ್ದು, ಪರೀಕ್ಷೆಯನ್ನು ಅತ್ಯಂತ ಸುಗಮ ಮತ್ತು ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತವು ಸರ್ವಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ. ​ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈ ಬಾರಿ ಒಟ್ಟು 26,954 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 12,665 ಪುರುಷ ಹಾಗೂ 14,289 ಮಹಿಳಾ ವಿದ್ಯಾರ್ಥಿಗಳಿದ್ದಾರೆ. ವಿಭಾಗವಾರು ಮಾಹಿತಿ…

Read More

​ಕುಂದಗೋಳ ಭೂ ಮಾಪನ ಇಲಾಖೆಯ ಲಂಚಬಾಕ ಸರ್ವೆಯರ್‌ಗೆ 4 ವರ್ಷ ಜೈಲು ಶಿಕ್ಷೆ: ಭ್ರಷ್ಟ ಅಧಿಕಾರಿಗಳಿಗೆ ಧಾರವಾಡ ನ್ಯಾಯಾಲಯದ ಬಿಸಿ

​ಧಾರವಾಡ: ರೈತನ ಜಮೀನು ಅಳತೆ ಮಾಡಿ ಪೋಡಿ ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕುಂದಗೋಳ ಭೂಮಾಪನ ಇಲಾಖೆಯ ಸರ್ವೆಯರ್‌ಗೆ ಧಾರವಾಡದ ವಿಶೇಷ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕರ ಕೆಲಸ ಮಾಡಿಕೊಡಲು ಹಣದ ಆಸೆ ತೋರಿಸುವ ಭ್ರಷ್ಟ ಅಧಿಕಾರಿಗಳಿಗೆ ಈ ತೀರ್ಪು ಒಂದು ಎಚ್ಚರಿಕೆಯ ಗಂಟೆಯಾಗಿದೆ. ​ಕುಂದಗೋಳ ಭೂಮಾಪನ ಇಲಾಖೆಯಲ್ಲಿ ಸರ್ವೆಯರ್ ಆಗಿದ್ದ ರಾಘವೇಂದ್ರ ಶಂಕರರಾವ ಕುಲಕರ್ಣಿ ಎಂಬುವವರೇ ಶಿಕ್ಷೆಗೊಳಗಾದ ಭ್ರಷ್ಟ ಅಧಿಕಾರಿ. ಕುಂದಗೋಳ ತಾಲೂಕಿನ ಶಿರೂರು ಗ್ರಾಮದ ಮಲ್ಲಿಕಾರ್ಜುನಗೌಡ ಭರಮಗೌಡ…

Read More

ತರ್ಲಘಟ್ಟ: ಹುಲಗೂರ-ಶಿಗ್ಗಾವ ರಸ್ತೆ ಪಕ್ಕದ ಜಮೀನಿನಲ್ಲಿ ಅಗ್ನಿ ಅವಘಡ; ಆರು ಮೇವಿನ ಬಣವೆಗಳು ಭಸ್ಮ

ಕುಂದಗೋಳ: ತಾಲೂಕಿನ ತರ್ಲಘಟ್ಟ ಗ್ರಾಮದ ವ್ಯಾಪ್ತಿಯಲ್ಲಿರುವ ಹುಲಗೂರ-ಶಿಗ್ಗಾವ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಜಮೀನಿನಲ್ಲಿ ಇಂದು ಸಂಜೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ರೈತರು ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೇವು ಹಾಗೂ ಬೆಳೆ ಬೆಂಕಿಗಾಹುತಿಯಾಗಿದೆ. ಸುಮಾರು 5 ಗಂಟೆ ವೇಳೆಗೆ ಕಾಣಿಸಿಕೊಂಡ ಈ ಬೆಂಕಿಯು ಕಿಡಿಗೇಡಿಗಳ ದುಷ್ಕೃತ್ಯವಿರಬಹುದು ಎಂದು ಶಂಕಿಸಲಾಗಿದೆ. ​ಗ್ರಾಮದ ರೈತರಾದ ಸಿದ್ದಲಿಂಗಪ್ಪ ಅಂಗಡಿ, ಬಸಪ್ಪ ಹಸಬಿ ಹಾಗೂ ಗುರುಸಿದ್ದಪ್ಪ ದ್ಯಾವನೂರ ಎಂಬುವವರಿಗೆ ಸೇರಿದ ಆರು ಗೋವಿನಜೋಳದ ಹೊಟ್ಟಿನ ಬಣವೆಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಂಪೂರ್ಣ…

Read More