ಧಾರವಾಡ ಹೈಕೋರ್ಟ್‌ನಲ್ಲಿ ರಾಷ್ಟ್ರೀಯ ಲೋಕ ಅದಾಲತ್: 366 ಪ್ರಕರಣ ಇತ್ಯರ್ಥ, ₹16.62 ಕೋಟಿ ಪರಿಹಾರಕ್ಕೆ ರಾಜಿ

ಧಾರವಾಡ: ಕರ್ನಾಟಕ ಉಚ್ಚ ನ್ಯಾಯಾಲಯದ ಧಾರವಾಡ ಪೀಠದಲ್ಲಿ ಜುಲೈ 11ರಂದು ಹಿರಿಯ ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ ಅವರ ನೇತೃತ್ವದಲ್ಲಿ ದ್ವಿತೀಯ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಯಾಗಿ ನಡೆಯಿತು. ನ್ಯಾಯಮೂರ್ತಿಗಳಾದ ಸಚಿನ್ ಶಂಕರ ಮಗದುಮ್, ಸಿ.ಎಂ. ಪೂನಚ್ಚ ಹಾಗೂ ಗೀತಾ ಕೆ.ಬಿ. ಅವರೊಂದಿಗೆ ಲೋಕ ಅದಾಲತ್ ಸದಸ್ಯರಾದ ಕೆ.ಎಲ್. ಪಾಟೀಲ, ಸಾಜಿದ್ ಗೂಡವಾಲಾ, ಎಂ.ಎಸ್. ಹಳ್ಳಿಕೇರಿ ಮತ್ತು ವಿದ್ಯಾವತಿ ಕೊಟ್ಟೂರಶೆಟ್ಟರ್ ಪಾಲ್ಗೊಂಡಿದ್ದು, ಒಟ್ಟು ನಾಲ್ಕು ಪೀಠಗಳನ್ನು ರಚಿಸಲಾಗಿತ್ತು. ಲೋಕ ಅದಾಲತ್‌ನಲ್ಲಿ ಒಟ್ಟು 1,037 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿದ್ದು,…

Read More

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅರ್ಜಿ ಆಹ್ವಾನ: ಆಗಸ್ಟ್ 31ರವರೆಗೆ ನೋಂದಣಿಗೆ ಅವಕಾಶ

ಧಾರವಾಡ, ಜು.7: 2026-27ನೇ ಸಾಲಿನ ಮುಂಗಾರು ಹಂಗಾಮಿಗಾಗಿ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ರೈತರ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಅರ್ಹ ರೈತರು ಆಗಸ್ಟ್ 31, 2026ರೊಳಗೆ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳುವಂತೆ ತೋಟಗಾರಿಕೆ ಇಲಾಖೆ ತಿಳಿಸಿದೆ. ಈ ಯೋಜನೆಯಡಿ ಕಲಘಟಗಿ ತಾಲೂಕಿನ ಎಲ್ಲಾ ಹೋಬಳಿಗಳಲ್ಲಿ ಮಾವು ಹಾಗೂ ದುಮ್ಮವಾಡ ಹೋಬಳಿಯಲ್ಲಿ ಹಸಿ ಮೆಣಸಿನಕಾಯಿ ಬೆಳೆಯುವ ರೈತರು ಬೆಳೆ ವಿಮೆ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ. ಯೋಜನೆಯಡಿ ನೋಂದಣಿ ಮಾಡಿಸಿಕೊಳ್ಳಲು ರೈತರು ಕಡ್ಡಾಯವಾಗಿ ಫಾರ್ಮರ್ ಐಡಿ (FID) ಹೊಂದಿರಬೇಕು….

Read More

ಧಾರವಾಡ:ಆತ್ಮ ಯೋಜನೆಯಡಿ ನೇರಗುತ್ತಿಗೆ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಜುಲೈ 20 ಕೊನೆಯ ದಿನ

ಧಾರವಾಡ, ಜು.7: 2026-27ನೇ ಸಾಲಿನ ಆತ್ಮ (ATMA) ಯೋಜನೆಯಡಿ ಧಾರವಾಡ ಜಿಲ್ಲೆಯ ಕೃಷಿ ಇಲಾಖೆಯ ವಿವಿಧ ಕಚೇರಿಗಳಲ್ಲಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕ (ATM) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಂಟಿ ಕೃಷಿ ನಿರ್ದೇಶಕರ ಕಚೇರಿ, ಧಾರವಾಡದ ಅಧೀನದಲ್ಲಿರುವ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಾದ ಧಾರವಾಡ, ಹುಬ್ಬಳ್ಳಿ, ಕಲಘಟಗಿ ಹಾಗೂ ಧಾರವಾಡ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಒಟ್ಟು ನಾಲ್ಕು (4) ಸಹಾಯಕ ತಾಂತ್ರಿಕ ವ್ಯವಸ್ಥಾಪಕ (ATM) ಹುದ್ದೆಗಳನ್ನು ನೇರಗುತ್ತಿಗೆ ಆಧಾರದ ಮೇಲೆ…

Read More

ರಸಗೊಬ್ಬರ ಕೊರತೆ ನಿರ್ವಹಣೆ ಹಾಗೂ ಪರ್ಯಾಯ ಗೊಬ್ಬರ ಬಳಕೆ ಕುರಿತು ರೈತರಿಗೆ ಒಂದು ದಿನದ ಕಾರ್ಯಾಗಾರ

ಧಾರವಾಡ: ಜಿಲ್ಲಾ ಕೃಷಿಕ ಸಮಾಜದ ವತಿಯಿಂದ ರಸಗೊಬ್ಬರ ಕೊರತೆ ನಿರ್ವಹಣೆ ಹಾಗೂ ಪರ್ಯಾಯ ವ್ಯವಸ್ಥೆ ಕುರಿತು ರೈತರಿಗೆ ಒಂದು ದಿನದ ಕಾರ್ಯಾಗಾರವನ್ನು ಭಾನುವಾರ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಆಯೋಜಿಸಲಾಯಿತು. ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಮಲ್ಲನಗೌಡ ಸೋಮನಗೌಡ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಉದ್ಘಾಟಿಸಿ ಮಾತನಾಡಿ, ರೈತರು ಕೇವಲ ರಾಸಾಯನಿಕ ಗೊಬ್ಬರಗಳನ್ನೇ ಅವಲಂಬಿಸದೆ ಮಣ್ಣು ಪರೀಕ್ಷೆಯ ಆಧಾರದ ಮೇಲೆ ಸಮತೋಲಿತ ಗೊಬ್ಬರ ಬಳಕೆಯೊಂದಿಗೆ…

Read More

ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ: ಅರ್ಹರಿಗೆ ಸೌಲಭ್ಯ ತಲುಪಿಸಲು ಅಧಿಕಾರಿಗಳಿಗೆ ಸೂಚನೆ – ಎಸ್.ಆರ್. ಪಾಟೀಲ

ಧಾರವಾಡ: ಮಳೆ ಅಥವಾ ಇತರೆ ಕಾರಣಗಳಿಂದ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡರೆ ಹೆಸ್ಕಾಂ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕು. ಅಲ್ಲದೆ ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಸೂಚಿಸಿದರು. ಭಾನುವಾರ (ಜು.6) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಧಾರವಾಡ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ…

Read More

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಕುಡಿಯುವ ನೀರು, ರಸಗೊಬ್ಬರ ಹಾಗೂ ಮೇವಿನ ಕೊರತೆ ಇರುವುದಿಲ್ಲ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ

ಧಾರವಾಡ , ಜು.6: ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಕುಡಿಯುವ ನೀರು, ರಸಗೊಬ್ಬರ ಹಾಗೂ ಮೇವಿನ ಯಾವುದೇ ಕೊರತೆ ಉಂಟಾಗುವುದಿಲ್ಲ. ಎಲ್ಲಿಯಾದರೂ ಕೊರತೆ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ತಕ್ಷಣ ವರದಿ ಸಲ್ಲಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಸೂಚಿಸಿದರು. ಸೋಮವಾರದಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಡಿಯೋ ಸಂವಾದದ ಮೂಲಕ ನಡೆದ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನಾ ಸಭೆಯ…

Read More

ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಸಚಿವ ಸತೀಶ ಜಾರಕಿಹೊಳಿ

ಧಾರವಾಡ, ಜು.4: ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆಯ ಕೊರತೆಯಿಂದ ಬೆಳೆ ಹಾನಿಯಾಗಿರುವ ಬಗ್ಗೆ ಸಮಗ್ರ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಲೋಕೋಪಯೋಗಿ ಹಾಗೂ ಧಾರವಾಡ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಮೇಲುಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ…

Read More

ಧಾರವಾಡ ಜಿಲ್ಲೆಯಲ್ಲಿ ಅಂಗನವಾಡಿ ಕಮ್ ಕ್ರಷ್ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಧಾರವಾಡ ಜಿಲ್ಲೆಯ ಆರು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ 42 ಅಂಗನವಾಡಿ ಕಮ್ ಕ್ರಷ್ ಕೇಂದ್ರಗಳಿಗೆ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಧಾರವಾಡ ಗ್ರಾಮೀಣ, ಹುಬ್ಬಳ್ಳಿ ಗ್ರಾಮೀಣ, ಹುಬ್ಬಳ್ಳಿ-ಧಾರವಾಡ ನಗರ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ತಾಲೂಕುಗಳ ವಿವಿಧ ಅಂಗನವಾಡಿ ಕಮ್ ಕ್ರಷ್ ಕೇಂದ್ರಗಳಲ್ಲಿ ಈ ಹುದ್ದೆಗಳು ಭರ್ತಿಯಾಗಲಿವೆ. ಕುಂದಗೋಳ ತಾಲೂಕಿನ ಕಳಸ, ಕುಂದಗೋಳ,…

Read More

ಕುಂದಗೋಳ ಬಳಿ ಭೀಕರ ರಸ್ತೆ ಅಪಘಾತ: ಲಾರಿ-ಬಸ್ ಮುಖಾಮುಖಿ ಡಿಕ್ಕಿ, ಶಿರೂರ ಗ್ರಾಮದ ಐಟಿಐ ವಿದ್ಯಾರ್ಥಿಯ ರುಂಡ ಕತ್ತರಿಸಿ ಸ್ಥಳದಲ್ಲೇ ದಾರುಣ ಸಾವು!

​ಕುಂದಗೋಳ: ಪಟ್ಟಣದ ಹುಬ್ಬಳ್ಳಿ-ಲಕ್ಷ್ಮೇಶ್ವರ ಮುಖ್ಯ ರಸ್ತೆಯ ಕೊಪ್ಪದ ಕೆರೆಯ ಬಳಿ ಬುಧವಾರ ಸಂಜೆ ಲಾರಿ ಹಾಗೂ ಸಾರಿಗೆ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐಟಿಐ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಅತ್ಯಂತ ದಾರುಣವಾಗಿ ಸಾವನ್ನಪ್ಪಿದ್ದಾನೆ. ಶಿರೂರ ಗ್ರಾಮದ ನಿವಾಸಿಯಾದ, ಐಟಿಐ ಓದುತ್ತಿದ್ದ ಫಕ್ಕೀರೇಶ ಚನ್ನಯ್ಯ ಮುತ್ತಳ್ಳಿಮಠ (ಅಂದಾಜು 17 ವರ್ಷ) ಎಂಬಾತನೇ ಈ ದುರ್ಘಟನೆಯಲ್ಲಿ ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ​ಸಂಜೆ ಸುಮಾರು 5 ಗಂಟೆಯ ವೇಳೆಗೆ ಲಕ್ಷ್ಮೇಶ್ವರ ಡಿಪೋಗೆ ಸೇರಿದ ಕೆ.ಎ. 26 ಎಫ್-1039 ನಂಬರಿನ…

Read More

ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ: ಧಾರವಾಡ ಜಿಲ್ಲೆಯಲ್ಲಿ ಶೇ.0.92 ಏಣಿಕೆ ನಮೂನೆಗಳ ವಿತರಣೆ

ಧಾರವಾಡ, ಜೂ.30: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ ಧಾರವಾಡ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ-ಮನೆಗೆ ಭೇಟಿ ನೀಡಿ ಏಣಿಕೆ, ಗಣತಿ ನಮೂನೆಗಳ ವಿತರಣೆಯನ್ನು ಆರಂಭಿಸಿದ್ದಾರೆ. ಜೂನ್ 30ರಿಂದ ಜುಲೈ 29ರವರೆಗೆ ನಡೆಯಲಿರುವ ಈ ಅಭಿಯಾನದ ಮೊದಲ ದಿನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟಾರೆ ಶೇ.0.92ರಷ್ಟು ಏಣಿಕೆ ನಮೂನೆಗಳನ್ನು ಮತದಾರರಿಗೆ ವಿತರಿಸಲಾಗಿದ್ದು, ಶೇ.0.02ರಷ್ಟು ಭರ್ತಿ ಮಾಡಿದ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಲಾಗಿದೆ. ಕ್ಷೇತ್ರವಾರು…

Read More