ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ: ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಚಿತ್ರಕಲೆ ಸ್ಪರ್ಧೆಗೆ ಅರ್ಜಿ ಆಹ್ವಾನ
ಧಾರವಾಡ; ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ (KSTA) ವತಿಯಿಂದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಹಾಗೂ ವಿಜ್ಞಾನದಲ್ಲಿ ಆಸಕ್ತಿಯನ್ನು ಮೂಡಿಸುವ ಉದ್ದೇಶದಿಂದ ಪ್ರೌಢಶಾಲಾ ಮತ್ತು ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈ ವರ್ಷದ ಸ್ಪರ್ಧೆಗಳ ವಿಷಯವು “ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ” ಎಂದಾಗಿದೆ. ಈ ಸ್ಪರ್ಧೆಗಳನ್ನು ನವೆಂಬರ್ 26, 2025 ರಂದು ಅಕಾಡೆಮಿಯ ಕಛೇರಿಯಲ್ಲಿ ಏರ್ಪಡಿಸಲಾಗಿದ್ದು, ರಾಜ್ಯದ ಎಲ್ಲ ಪ್ರೌಢಶಾಲಾ ಹಾಗೂ ವಿಜ್ಞಾನ ಪದವಿ ವಿದ್ಯಾರ್ಥಿಗಳನ್ನು ಭಾಗವಹಿಸಲು…

