ಡಿ. 21 ರಂದು ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ: 2.07 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ
ಧಾರವಾಡ, ಡಿ. 11: ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಡಿಯಲ್ಲಿ ಡಿಸೆಂಬರ್ 21 ರಂದು ಐದು ವರ್ಷದೊಳಗಿನ ಸುಮಾರು 2,07,837 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಬೃಹತ್ ಗುರಿಯನ್ನು ಹೊಂದಲಾಗಿದೆ. ಈ ಕುರಿತು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾ ಭವನದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಅಭಿಯಾನದ ಯಶಸ್ಸಿಗಾಗಿ ಆರೋಗ್ಯ, ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯದಿಂದ…

