ಮರಾಠ ಸಮುದಾಯದ ಮಹಿಳೆಯರಿಗಾಗಿ ಹೊಲಿಗೆ ಯಂತ್ರ ಸೌಲಭ್ಯ – ಅರ್ಜಿ ಆಹ್ವಾನ
ಧಾರವಾಡ, ನವೆಂಬರ್ 11: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮವು 2025–26ನೇ ಸಾಲಿಗೆ ಹೊಲಿಗೆ ಯಂತ್ರ ವಿತರಣಾ ಯೋಜನೆಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ನಿಗಮದಿಂದ ಆರ್ಥಿಕವಾಗಿ ಹಿಂದುಳಿದ ಮರಾಠ ಸಮುದಾಯದ ಮಹಿಳಾ ಅಭ್ಯರ್ಥಿಗಳಿಗೆ ಸ್ವಾವಲಂಬನೆ ಹಾಗೂ ಆರ್ಥಿಕಾಭಿವೃದ್ದಿಗೆ ನೆರವಾಗುವ ಉದ್ದೇಶದಿಂದ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆಸಕ್ತ ಅರ್ಹ ಮಹಿಳೆಯರು ಡಿಸೆಂಬರ್ 6, 2025 ರೊಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಈ ಸೇವೆಯನ್ನು ಗ್ರಾಮ ಒನ್, ಕರ್ನಾಟಕ ಒನ್…

