ಯುವನಿಧಿ ಪ್ರಗತಿ ಕುಂಠಿತ: ಗೃಹಲಕ್ಷ್ಮಿಯಲ್ಲಿ ಉತ್ತಮ ಸಾಧನೆ; ಜಿಲ್ಲಾ ಪಂಚಾಯತ್‌ನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ, ಅಧ್ಯಕ್ಷ ಎಸ್.ಆರ್. ಪಾಟೀಲ ಸೂಚನೆ

📰 ಜಿಲ್ಲಾ ಪಂಚಾಯತದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಧಾರವಾಡ, ನ. 05: ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು (ನವೆಂಬರ್ 5) ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅವರು ಅಧ್ಯಕ್ಷತೆ ವಹಿಸಿ, ವಿವಿಧ ಯೋಜನೆಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಿದರು. ಸಭೆಯಲ್ಲಿ ಅವರು ಮಾತನಾಡಿ, “ಯುವನಿಧಿ ಯೋಜನೆಯ ಪ್ರಗತಿ ನಿರೀಕ್ಷಿತ ಮಟ್ಟಕ್ಕಿಂತ ಕುಂಠಿತವಾಗಿದೆ. ಈ ಯೋಜನೆಯ ಬಗ್ಗೆ ತಾಲೂಕು ಹಾಗೂ…

Read More

ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಕಲಾಪ್ರತಿಭೋತ್ಸವ ಕಾರ್ಯಕ್ರಮ – ಅಭ್ಯರ್ಥಿಗಳ ನೋಂದಣಿಗೆ ನವೆಂಬರ್ 18 ಕೊನೆಯ ದಿನ

ಧಾರವಾಡ ನ.05: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಕ್ಕಳು ಮತ್ತು ಯುವಜನರ ಕಲಾಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತೇಜನ ನೀಡುವ ಮತ್ತು ತಮ್ಮ ಕಲಾನೈಪುಣ್ಯತೆಯನ್ನು ವೃದ್ಧಿಗೊಳಿಸಲು ಪ್ರೋತ್ಸಾಹಿಸುವ ಉದ್ದೇಶದಿಂದ ಕಲಾಪ್ರತಿಭೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸುವರ್ಣ ಸಾಂಸ್ಕೃತಿಕ ಸಮುಚ್ಛಯ, ಕಾಲೇಜು ರಸ್ತೆ, ಧಾರವಾಡ–580001 (ದೂರವಾಣಿ: 0836-2442909) ಗೆ ಅಂಚೆ ಮೂಲಕ ಅಥವಾ ಖುದ್ದಾಗಿ ನವೆಂಬರ್ 18, 2025ರೊಳಗೆ ಸಲ್ಲಿಸಬೇಕು ಎಂದು ಇಲಾಖೆಯು ತಿಳಿಸಿದೆ. ವಯೋಮಿತಿ:…

Read More

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಪ್ರವೇಶ ಪತ್ರ ಡೌನ್ಲೋಡ್ ಮಾಡಲು ಸೂಚನೆ

ಧಾರವಾಡ, ನ. 5: 2025–26 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐಎಎಸ್ ಮತ್ತು ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತರಬೇತಿಯನ್ನು ನೀಡಲಾಗುತ್ತಿದೆ. ಈ ತರಬೇತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಇಲಾಖೆಯು ಆಯೋಜಿಸಿದೆ. ಗ್ರೂಪ್-ಸಿ ಹುದ್ದೆಗಳಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಪ್ರವೇಶ ಪರೀಕ್ಷೆಯನ್ನು ನವೆಂಬರ್ 8, 2025 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ಹುಬ್ಬಳ್ಳಿ ನವನಗರದ ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆಯಲ್ಲಿ…

Read More

🚌 ನ. 7 ರಂದು ಧಾರವಾಡ ನೂತನ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆ

ಧಾರವಾಡ: ನ. 5: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಯಿಂದ ಧಾರವಾಡದ ನೂತನ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ ನವೆಂಬರ್ 7, 2025 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ನಗರ ಸಾರಿಗೆಗೆ ಹೊಸ ಚೈತನ್ಯ ನೀಡುವ ಈ ನಿಲ್ದಾಣದ ಉದ್ಘಾಟನೆಗೆ ರಾಜ್ಯ ಮತ್ತು ಕೇಂದ್ರದ ಅನೇಕ ಗಣ್ಯರು ಹಾಜರಾಗಲಿದ್ದಾರೆ. ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ…

Read More

ರಾಜ್ಯಮಟ್ಟದ ಪುರುಷರ ಲಾನ್ ಟೆನ್ನಿಸ್ ಪಂದ್ಯಾವಳಿಗೆ ಧಾರವಾಡ ಸಜ್ಜು: ನ. 7 ರಿಂದ 9 ರವರೆಗೆ ಪಂದ್ಯಾವಳಿ

ಧಾರವಾಡ : ನ.5: ಧಾರವಾಡ ಡಿಸ್ಟ್ರಿಕ್ಟ್ ಲಾನ್ ಟೆನ್ನಿಸ್ ಅಸೋಸಿಯೇಷನ್ (DDLTA) ವತಿಯಿಂದ ನವೆಂಬರ್ 7 ರಿಂದ 9 ರವರೆಗೆ ರಾಜ್ಯಮಟ್ಟದ ಪುರುಷರ ಲಾನ್ ಟೆನ್ನಿಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಡಿಡಿಎಲ್‌ಟಿಎ ಕಾರ್ಯದರ್ಶಿ ಸಂತೋಷ ಶೆಟ್ಟಿ ಅವರು ತಿಳಿಸಿದ್ದಾರೆ. ಈ ಮೂಲಕ ಉತ್ತರ ಕರ್ನಾಟಕದ ಕ್ರೀಡಾ ಚಟುವಟಿಕೆಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡಲು ಧಾರವಾಡ ಸಜ್ಜಾಗಿದೆ. ​ಇಂದು (ನ.5) ಸಂಜೆ ಧಾರವಾಡ ಡಿಸ್ಟ್ರಿಕ್ಟ್ ಲಾನ್ ಟೆನ್ನಿಸ್ ಅಸೋಸಿಯೇಷನ್ ಕಚೇರಿ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂತೋಷ ಶೆಟ್ಟಿ, ಪಂದ್ಯಾವಳಿಯು…

Read More

ಕಾಂಗ್ರೆಸ್ ತೆಕ್ಕೆಗೆ ಚಾಕಲಬ್ಬಿ ಗ್ರಾ.ಪಂ.: ಅಂಜುಮಾಬೇಂಗಂ ಇ ನಧಾಪ್ ಅಧ್ಯಕ್ಷೆ, ದೇವಕ್ಕ ದೇ ಕಾಳಿ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

ಕುಂದಗೋಳ: ತಾಲ್ಲೂಕಿನ ಚಾಕಲಬ್ಬಿ ಗ್ರಾಮ ಪಂಚಾಯಿತಿಗೆ ಮಂಗಳವಾರದಂದು ನಡೆದ ಎರಡನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆಯಲ್ಲಿ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಪಕ್ಷದ ತೆಕ್ಕೆಗೆ ಜಾರಿದೆ. ಒಟ್ಟು 8 ಜನ ಸದಸ್ಯ ಬಲ ಹೊಂದಿರುವ ಚಾಕಲಬ್ಬಿ ಗ್ರಾ.ಪಂ.ನಲ್ಲಿ ಈ ಪ್ರಕ್ರಿಯೆ ನಡೆಯಿತು. ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಅಂಜುಮಾಬೇಂಗಂ ಇಬ್ರಾಹಿಂಸಾಬ ನಧಾಪ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ದೇವಕ್ಕ ದೇವಪ್ಪ ಕಾಳಿ ಅವರು ನಾಮಪತ್ರ ಸಲ್ಲಿಸಿದ್ದರು. ಇವರ…

Read More

ಸಮಂಜಸ ಪ್ರಶ್ನೆಗಳೇ ಶಿಕ್ಷಣದಲ್ಲಿ ಬದಲಾವಣೆಗೆ ಮುನ್ನುಡಿ: ಡಾ. ಗಣೇಶ ದೇವಿ; ಪ್ರಜಾಪ್ರಭುತ್ವದ ಸೂಚ್ಯಂಕ ಕುಸಿತಕ್ಕೆ ಕಳವಳ

ಧಾರವಾಡ: ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ಸಮಂಜಸವಾದ ಪ್ರಶ್ನೆಗಳನ್ನು ಕೇಳಿದಾಗ ಮಾತ್ರ ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆ ತರಬಹುದು. ಪ್ರಶ್ನೆ ಕೇಳುವುದರಿಂದ ತಾರ್ಕಿಕ ಶಕ್ತಿ ವೃದ್ಧಿಸುತ್ತದೆ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಭಾಷಾ ತಜ್ಞರಾದ ಪ್ರೊ. ಗಣೇಶ ಎನ್. ದೇವಿ ಅವರು ಅಭಿಪ್ರಾಯಪಟ್ಟರು. ಅವರು ಸೋಮವಾರದಂದು ಕರ್ನಾಟಕ ವಿದ್ಯಾವರ್ಧಕ ಸಂಘವು 70ನೇ ಕರ್ನಾಟಕ ರಾಜ್ಯೋತ್ಸವ ನಾಡಹಬ್ಬ–2025 ಅಂಗವಾಗಿ ಆಯೋಜಿಸಿದ್ದ ತಿಂಗಳಪೂರ್ಣ ಕಾರ್ಯಕ್ರಮದ ಅಡಿಯಲ್ಲಿ ನಡೆದ ‘ಧರೆಗೆ ದೊಡ್ಡವರು’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಜನಗಣತಿ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಆತಂಕ…

Read More

ರೈತ ಸಂಘಟನೆಗಳ ಹೋರಾಟಕ್ಕೆ ಜಯ: ಕಬ್ಬು ಬೆಳೆಗಾರರಿಗೆ ಒಟ್ಟು ₹42 ಕೋಟಿ ದೊರಕಿದ ಸಂತಸ; ಸಚಿವ ಸಂತೋಷ್ ಲಾಡ್‌ಗೆ ಅಭಿನಂದನೆ

🌾 ರೈತ ಸಂಘಟನೆಗಳ ಹೋರಾಟಕ್ಕೆ ಜಯ: ಕಬ್ಬು ಬೆಳೆಗಾರರಿಗೆ ಒಟ್ಟು ₹42 ಕೋಟಿ ದೊರಕಿದ ಸಂತಸ; ಸಚಿವ ಸಂತೋಷ್ ಲಾಡ್‌ಗೆ ಅಭಿನಂದನೆ ಕಲಘಟಗಿ : ಪಟ್ಟಣದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ರೈತ ಸಂಘಟನೆ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘಟನೆಯ ಪದಾಧಿಕಾರಿಗಳು ಮಾತನಾಡಿ, ನಿರಂತರ ಹೋರಾಟದ ಫಲವಾಗಿ ಕಬ್ಬು ಬೆಳೆಗಾರರಿಗೆ ಒಟ್ಟು ₹42 ಕೋಟಿಗಳಷ್ಟು ಹಣವನ್ನು ಒದಗಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಘೋಷಿಸಿದರು. ಈ ಯಶಸ್ವಿ ಹೋರಾಟಕ್ಕೆ ಬೆಂಬಲ ನೀಡಿದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್…

Read More

ನಾಡಹಬ್ಬ-2025: ಕ.ವಿ.ವ. ಸಂಘದಿಂದ ತಿಂಗಳ ಪೂರ್ಣ ಕಾರ್ಯಕ್ರಮಕ್ಕೆ ಚಾಲನೆ — 3ರಂದು ‘ಡಾ. ಗಣೇಶ ದೇವಿ’ ಅವರಿಂದ ‘ಧರೆಗೆ ದೊಡ್ಡವರು’ ಸಂವಾದ

ಧಾರವಾಡ: ನಾಡಿನ ಹೆಮ್ಮೆಯ ಸಂಸ್ಥೆಯಾದ ಕರ್ನಾಟಕ ವಿದ್ಯಾವರ್ಧಕ ಸಂಘ (ಕ.ವಿ.ವ. ಸಂಘ)ವು, 70ನೇ ಕರ್ನಾಟಕ ರಾಜ್ಯೋತ್ಸವ ನಾಡಹಬ್ಬ–2025ರ ಅಂಗವಾಗಿ ನವೆಂಬರ್ 1 ರಿಂದ 30ರವರೆಗೆ ತಿಂಗಳ ಪೂರ್ಣ ವೈವಿಧ್ಯಮಯ ಕಾರ್ಯಕ್ರಮಗಳ ಸರಣಿಯನ್ನು ಹಮ್ಮಿಕೊಂಡಿದೆ. ಈ ಕುರಿತು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸರಣಿಯ ಅಂಗವಾಗಿ, ನವೆಂಬರ್ 3, 2025ರಂದು ಬೆಳಿಗ್ಗೆ 11 ಗಂಟೆಗೆ ‘ಧರೆಗೆ ದೊಡ್ಡವರು’ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬರೋಡಾದ ಅಂತಾರಾಷ್ಟ್ರೀಯ ಭಾಷಾ ತಜ್ಞರಾದ ಡಾ. ಗಣೇಶ…

Read More

ವಿದ್ಯಾರ್ಥಿ ಅರುಣ ಗುಡ್ಡದಕೇರಿಗೆ ರಾಜ್ಯಮಟ್ಟದ ಬಾಡಿ ಬಿಲ್ಡಿಂಗ್‌ನಲ್ಲಿ ಚಿನ್ನದ ಪದಕ

📰 ವಿದ್ಯಾರ್ಥಿ ಅರುಣ ಗುಡ್ಡದಕೇರಿಗೆ ರಾಜ್ಯಮಟ್ಟದ ಬಾಡಿ ಬಿಲ್ಡಿಂಗ್‌ನಲ್ಲಿ ಚಿನ್ನದ ಪದಕ ಧಾರವಾಡ: ಜಿಲ್ಲೆಯ ಹುಬ್ಬಳ್ಳಿ ನಗರದ ವಿದ್ಯಾರ್ಥಿಯೊಬ್ಬರು ರಾಜ್ಯಮಟ್ಟದ ಫಿಜಿಕ್ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಹುಬ್ಬಳ್ಳಿ ನಗರದ ಕುಮಾರ್ ಅರುಣ ಗಂಗಾಧರ ಗುಡ್ಡದಕೇರಿ ಇವರು ಬೆಂಗಳೂರಿನಲ್ಲಿ ಅಕ್ಟೋಬರ್ ತಿಂಗಳಲ್ಲಿ ನಡೆದ ರಾಜ್ಯಮಟ್ಟದ ದೇಹದಾರ್ಢ್ಯ (ಬಾಡಿ ಬಿಲ್ಡರ್) ಸ್ಪರ್ಧೆಯಲ್ಲಿ ರಾಜ್ಯಕ್ಕೆ ಚಿನ್ನದ ಪದಕ ಹಾಗೂ ಎಮ್.ಆರ್.ವಿ.ಟಿ.ಯು. ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಅರುಣ ಅವರು ವಿಜಯನಗರದ ವೀರಶೈವ ವಿದ್ಯಾವರ್ಧಕ ಸಂಘದ…

Read More