ಸರ್ಕಾರಿ ನೌಕರರಿಗೆ ಡಿ. 2 ರಂದು ವಿಶೇಷ ಉಪನ್ಯಾಸ: ಕೆಜಿಐಡಿ ಸೌಲಭ್ಯ, ಸೈಬರ್ ಅಪರಾಧಗಳ ಕುರಿತು ಜಾಗೃತಿ
ಧಾರವಾಡ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಸರ್ಕಾರಿ ನೌಕರರ ಕರ್ತವ್ಯದ ಸಾಮರ್ಥ್ಯ ಹೆಚ್ಚಿಸಲು ಮತ್ತು ಆರ್ಥಿಕ ವಂಚನೆ, ಮೋಸಗಳಿಂದ ಸುರಕ್ಷಿತವಾಗಿರಲು ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶೇಷ ಉಪನ್ಯಾಸ ಮಾಲಿಕೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಇದರ ಭಾಗವಾಗಿ, ಡಿಸೆಂಬರ್ 2, 2025 ರಂದು ಸಂಜೆ 4 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅವರು ಹೇಳಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಪ್ರತಿ ತಿಂಗಳು…

