ಕುಂದಗೋಳ: ‘ಭ್ರಷ್ಟಾಚಾರಕ್ಕೆ ಒಳಗಾಗದೆ, ನಿಷ್ಠೆಯಿಂದ ಕೆಲಸ ನಿರ್ವಹಿಸಿ’ – ಲೋಕಾಯುಕ್ತ ಇನ್ಸ್‌ಪೆಕ್ಟರ್ ಬಸವರಾಜ ಬುದ್ನಿ ಕರೆ

ಕುಂದಗೋಳ: ಲೋಕಾಯುಕ್ತ ಕಾಯ್ದೆಯ ವ್ಯಾಪ್ತಿ ಹೆಚ್ಚಾಗಿದ್ದು, ಸರ್ಕಾರಿ ಅಧಿಕಾರಿಗಳು ಮೈಯೆಲ್ಲ ಕಣ್ತ ತುಂಬಿಕೊಂಡು ಕೆಲಸ ನಿರ್ವಹಿಸಬೇಕು. ಯಾವುದೇ ಸಮಯದಲ್ಲಿ ಏನೆಲ್ಲಾ ಆಗಬಹುದು ಎಂದು ಊಹಿಸಲು ಸಾಧ್ಯವಿಲ್ಲ, ಮತ್ತು ಸಣ್ಣ ತಪ್ಪುಗಳೂ ಸಹ ವೇಗವಾಗಿ ಪ್ರಚಾರಗೊಳ್ಳುವ ಸಾಧ್ಯತೆ ಇದೆ ಎಂದು ಲೋಕಾಯುಕ್ತ ಇನ್ಸ್‌ಪೆಕ್ಟರ್ ಬಸವರಾಜ ಬುದ್ನಿ ಅವರು ಸರ್ಕಾರಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಬುಧವಾರದಂದು ತಹಸೀಲ್ದಾರ್ ಕಚೇರಿ ಸಭಾಭವನದಲ್ಲಿ ಕರ್ನಾಟಕ ಲೋಕಾಯುಕ್ತ ಧಾರವಾಡ ಇವರ ವತಿಯಿಂದ ಆಯೋಜಿಸಲಾಗಿದ್ದ ‘ಭ್ರಷ್ಟಾಚಾರ ನಿಗ್ರಹ ಜಾಗೃತಿ ಅರಿವು ಸಪ್ತಾಹ–೨೦೨೫’ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು…

Read More

ದೇಶಾಭಿಮಾನಕ್ಕೆ ಸೇವಾ ಮನೋಭಾವ ಬೆಳೆಸಿಕೊಳ್ಳಿ’: ಶ್ರೀ ಫಕೀರ ಸಿದ್ಧರಾಮ ಮಹಾಸ್ವಾಮಿಗಳು ಕರೆ

ಕುಂದಗೋಳ: ಇಂದಿನ ಮಕ್ಕಳಲ್ಲಿ ನಮ್ಮ ದೇಶದ ಪ್ರಜ್ಞೆಯನ್ನು ಬೆಳೆಸುವ ದೃಷ್ಟಿಯಿಂದ ವಿದ್ಯಾರ್ಥಿಗಳು ನಿಸ್ವಾರ್ಥದಿಂದ ದೇಶಕ್ಕಾಗಿ ಶ್ರಮಿಸುವಂತಹವರಾಗಬೇಕು. ಭಾರತ ಮಾತೆಯ ಸೇವಕರಾದರೆ ಭಾರತದ ಒಳ್ಳೆಯ ರತ್ನಗಳಾಗಬಹುದು. ಆದ್ದರಿಂದ ಈ ತರಬೇತಿ ಶಿಬಿರದ ಸದುಪಯೋಗ ಪಡೆದುಕೊಳ್ಳಿ ಎಂದು ಭಾವೈಕ್ಯತಾ ಸಂಸ್ಥಾನ ಮಠದ ಶ್ರೀ ಫಕೀರ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು. ಅವರು ತಾಲ್ಲೂಕಿನ ಸಂಶಿ ಗ್ರಾಮದ ಶ್ರೀ ಜ. ಫಕೀರೇಶ್ವರ ಮಠದಲ್ಲಿ ಶಿಕ್ಷಣ ಸಮಿತಿಯ ಕುಂದಗೋಳದ ಹರಭಟ್ಟ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಸಕ್ತ ವರ್ಷದ ರಾಷ್ಟ್ರೀಯ ಸೇವಾ ಯೋಜನಾ (ಎನ್‌ಎಸ್‌ಎಸ್)…

Read More

ನ. 8 ರಂದು ಕನಕದಾಸ ಜಯಂತಿ, ನ. 11 ರಂದು ಓಬವ್ವ ಜಯಂತಿ: ಪೂರ್ವಭಾವಿ ಸಭೆ ನಾಳೆ

ಧಾರವಾಡ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನವೆಂಬರ್ 08 ರಂದು ಶ್ರೀ ಕನಕದಾಸರ ಜಯಂತಿ ಮತ್ತು ನವೆಂಬರ್ 11 ರಂದು ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಆಯೋಜಿಸುವ ಸಂಬಂಧ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಜಯಂತಿಗಳ ಅಚ್ಚುಕಟ್ಟಾದ ಆಚರಣೆ ಕುರಿತು ಚರ್ಚಿಸಲು ಮತ್ತು ಯೋಜಿಸಲು ಈ ಪೂರ್ವಭಾವಿ ಸಭೆಯನ್ನು ಅಕ್ಟೋಬರ್ 30 ರಂದು (ನಾಳೆ) ಸಂಜೆ ೪ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪ್ರಕಟಣೆಯಲ್ಲಿ…

Read More

ಧಾರವಾಡ:ವಿಶೇಷ ಸಂಪನ್ಮೂಲ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ: ನ. 06 ಕೊನೆಯ ದಿನ

ಧಾರವಾಡ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುವಂತೆ, ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ೨೦೨೫–೨೬ ನೇ ಸಾಲಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ನೇರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನವೆಂಬರ್ 06,2025 ರೊಳಗಾಗಿ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಶೇಷ ಡಿಇಡಿ (D.Ed) ಅಥವಾ ಬಿಇಡಿ (B.Ed) ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. ನೇರಗುತ್ತಿಗೆ ಆಧಾರದ ಮೇಲೆ ಆಯ್ಕೆಯಾದ ಈ ಸಮನ್ವಯ…

Read More

ಕುಂದಗೋಳ: ‘ಸ್ವಸ್ಥ ನಾರಿ ಸಶಕ್ತ ಪರಿವಾರ’ದಿಂದ ಸದೃಢ ಭಾರತ ನಿರ್ಮಾಣ ಸಾಧ್ಯ: ಶಾಸಕ ಎಂ.ಆರ್. ಪಾಟೀಲ

ಕುಂದಗೋಳ:ಪ್ರತಿಯೊಬ್ಬ ನಾರಿಯು ಸದೃಢವಾಗಿದ್ದರೆ ಮತ್ತು ಆರೋಗ್ಯವಂತಳಾಗಿದ್ದರೆ ಮಾತ್ರ ಕುಟುಂಬದಲ್ಲಿ ಎಲ್ಲರೂ ಆರೋಗ್ಯವಾಗಿರುತ್ತಾರೆ. ಈ ಉದ್ದೇಶದಿಂದ ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ‘ಸ್ವಸ್ಥ ನಾರಿ ಸಶಕ್ತ ಪರಿವಾರ’ ಅಭಿಯಾನವು ಸದೃಢ ಕುಟುಂಬಗಳ ಮೂಲಕ ಬಲಿಷ್ಠ ಭಾರತವನ್ನು ನಿರ್ಮಿಸುವ ಗುರಿ ಹೊಂದಿದೆ ಎಂದು ಕುಂದಗೋಳ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಎಂ.ಆರ್. ಪಾಟೀಲ ಅವರು ಹೇಳಿದರು. ಅವರು ಬುಧುವಾರದಂದು ಪಟ್ಟಣದ ಶಿವಾನಂದ ಮಠದ ಸಭಾಭವನದಲ್ಲಿ ಭಾರತ ಸರ್ಕಾರದ ಕೇಂದ್ರ ಸಂವಹನ ಇಲಾಖೆ, ಧಾರವಾಡದ ನೇತೃತ್ವದಲ್ಲಿ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ಶಿಶು…

Read More

🛣️ ಕಳಪೆ ಗೋವಿನಜೋಳದ ಬೀಜ ವಿತರಣೆ ವಿರೋಧಿಸಿ ಹೆದ್ದಾರಿ ತಡೆ!ಎಕರೆಗೆ 50 ಸಾವಿರ ರೂ. ಪರಿಹಾರ ಹಾಗೂ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲು ಮಹಾದಾಯಿ, ಮಲಪ್ರಭಾ ರೈತ ಹೋರಾಟ ಒಕ್ಕೂಟ ಆಗ್ರಹ

ನವಲಗುಂದ: ತಾಲ್ಲೂಕಿನಾದ್ಯಂತ ರೈತರಿಗೆ ಕಳಪೆ ಗುಣಮಟ್ಟದ ಗೋವಿನಜೋಳದ ಬೀಜಗಳನ್ನು ಪೂರೈಸಿ ಭಾರೀ ನಷ್ಟ ಉಂಟು ಮಾಡಿದ ಖಾಸಗಿ ಕಂಪನಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಮಹಾದಾಯಿ, ಮಲಪ್ರಭಾ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟದ ವತಿಯಿಂದ ಮಂಗಳವಾರ ಹುಬ್ಬಳ್ಳಿ-ಸೋಲಾಪೂರ ರಾಷ್ಟ್ರೀಯ ಹೆದ್ದಾರಿಯನ್ನು ಕೆಲ ಕಾಲ ತಡೆದು ಪ್ರತಿಭಟನೆ ನಡೆಸಲಾಯಿತು. ಕಳಪೆ ಬೀಜ ವಿತರಣೆಯಿಂದ ರೈತರಿಗೆ ಉಂಟಾದ ಹಾನಿಗೆ ಸರ್ಕಾರ ಮಧ್ಯ ಪ್ರವೇಶಿಸಿ, ಆ ಕಂಪನಿಯಿಂದ ಎಕರೆಗೆ ತಲಾ 50,000 ರೂ.ಗಳ ಪರಿಹಾರ ನೀಡಲು ಸೂಚಿಸಬೇಕು. ಜೊತೆಗೆ, ಸಾರ್ವಜನಿಕರಿಗೆ…

Read More

ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಚಿವ ಲಾಡ್ ತೀವ್ರ ತರಾಟೆ!ಜಾತಿ-ಆದಾಯ ಪ್ರಮಾಣಪತ್ರ ವಿತರಣೆ ವಿಳಂಬ, ಆಸ್ತಿ ಕಡತಗಳ ಬಾಕಿ ಉಳಿಸಿಕೊಂಡಿದ್ದಕ್ಕೆ ಸಚಿವರು ಗರಂ; ಅಮಾನತಿಗೆ ಸೂಚನೆ

ಕಲಘಟಗಿ: ಜಾತಿ ಹಾಗೂ ಆದಾಯ ಪ್ರಮಾಣಪತ್ರ ವಿತರಣೆಯಲ್ಲಿನ ವಿಳಂಬ ಮತ್ತು ಆಸ್ತಿ ಕಡತಗಳನ್ನು ಬಾಕಿ ಉಳಿಸಿಕೊಂಡಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಕಂದಾಯ ಇಲಾಖೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ಕಲಘಟಗಿಯಲ್ಲಿ ನಡೆದಿದೆ. ಕರ್ತವ್ಯ ಲೋಪ ಎಸಗಿದ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಕಲಘಟಗಿ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಮಂಗಳವಾರದಂದು ಜಿಲ್ಲಾಡಳಿತದಿಂದ ಆಯೋಜಿಸಲಾದ 18ನೇ ಜಿಲ್ಲಾಮಟ್ಟದ ಜನಸಂಪರ್ಕ ಸಭೆ (ಜನತಾ ದರ್ಶನ) ಯಲ್ಲಿ ಈ ಘಟನೆ…

Read More

ಬೀದಿ ಬದಿ ವ್ಯಾಪಾರಿಗಳಿಗೆ ಬಸ್ ನಿಲ್ದಾಣದಲ್ಲಿ ವ್ಯಾಪಾರಕ್ಕೆ ಅನುಮತಿ ಕೋರಿ ಮನವಿರಾಮ ರಹೀಮ ಬೀದಿ ಬದಿ ವ್ಯಾಪಾರಸ್ಥರ ಸಂಘದಿಂದ ಶಾಸಕ ಕೋನರಡ್ಡಿ ಮೂಲಕ ತಹಶೀಲ್ದಾರರಿಗೆ ಮನವಿ

ನವಲಗುಂದ: ಸ್ಥಳೀಯ ಬಸ್ ನಿಲ್ದಾಣದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಕಡಲೆಕಾಯಿ, ಶೇಂಗಾ, ಲಿಂಬಿಹುಳಿ, ಹಣ್ಣು ಇತ್ಯಾದಿಗಳನ್ನು ವ್ಯಾಪಾರ ಮಾಡಲು ಅನುಮತಿಯನ್ನು ನೀಡುವಂತೆ ಆಗ್ರಹಿಸಿ ರಾಮ ರಹೀಮ ಬೀದಿ ಬದಿ ವ್ಯಾಪಾರಸ್ಥರ ಸಂಘದ ವತಿಯಿಂದ ಮಂಗಳವಾರ ಶಾಸಕ ಎನ್.ಹೆಚ್. ಕೋನರಡ್ಡಿ ಹಾಗೂ ಶಿರೇಸ್ತದಾರ ಗಣೇಶ ಚಳ್ಳಕೆರೆ ಅವರ ಮುಖಾಂತರ ತಹಶೀಲ್ದಾರವರಿಗೆ ಮನವಿ ಸಲ್ಲಿಸಲಾಯಿತು. ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯಕ್ಕೆ ಅನುಕೂಲವಾಗುವಂತೆ ಬಸ್ ನಿಲ್ದಾಣದಲ್ಲಿ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಸಂಘವು ಮನವಿ ಪತ್ರದಲ್ಲಿ ಒತ್ತಾಯಿಸಿದೆ. ಈ ಮನವಿ ಸಲ್ಲಿಸುವ ಸಂದರ್ಭದಲ್ಲಿ…

Read More

ಸಹಕಾರ ರತ್ನ ಪ್ರಶಸ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನ

ಧಾರವಾಡ: ಅ.28: ರಾಜ್ಯ ಸರ್ಕಾರವು ನೀಡುವ ಸಹಕಾರ ರತ್ನ 2025ನೇ ಸಾಲಿನ ಪ್ರಶಸ್ತಿಗಾಗಿ ಅರ್ಹ ಸಹಕಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಹಕಾರ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ನಿಷ್ಕಳಂಕ ಸೇವೆ ಸಲ್ಲಿಸಿರುವ, ಧಾರವಾಡ ಜಿಲ್ಲೆಯ ನಿವಾಸಿಗಳು ತಮ್ಮ ವೈಯಕ್ತಿಕ ಪರಿಚಯ, ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವಿವರ, ಸಹಕಾರ ಚಳುವಳಿಯಲ್ಲಿ ತೊಡಗಿಸಿಕೊಂಡಿರುವ ವಿವರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಧಾರವಾಡ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಅಕ್ಟೋಬರ್ 30, 2025 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು ಎಂದು ಸಹಕಾರ ಸಂಘಗಳ ಉಪನಿಬಂಧಕ…

Read More

ನವೆಂಬರ್ 1 ರಂದು 70ನೇ ಕರ್ನಾಟಕ ರಾಜ್ಯೋತ್ಸವ: ಧಾರವಾಡದಲ್ಲಿ ಭವ್ಯ ಧ್ವಜಾರೋಹಣ ಕಾರ್ಯಕ್ರಮ

ಧಾರವಾಡ :ಜಿಲ್ಲಾಡಳಿತವು ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಭವ್ಯ ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಿದೆ. ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸಾರ್ವಜನಿಕರಿಗೆ ರಾಜ್ಯೋತ್ಸವ ಸಂದೇಶ ನೀಡುವರು. ಕಾರ್ಯಕ್ರಮದಲ್ಲಿ ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವರಾದ ಪ್ರಲ್ಹಾದ ಜೋಶಿ, ಹಾಗೂ…

Read More