ರೈತರಿಗೆ ಬಿಗ್ ರಿಲೀಫ್: ಪರಿಹಾರ ಮೊತ್ತವನ್ನು ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳಬೇಡಿ – ಬ್ಯಾಂಕ್‌ಗಳಿಗೆ ಡಿಸಿ ದಿವ್ಯ ಪ್ರಭು ಖಡಕ್ ಸೂಚನೆ
ಧಾರವಾಡ: ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಬೆಳೆ ಹಾನಿಗಳಿಗೆ ಸಂಬಂಧಿಸಿದಂತೆ ಸರ್ಕಾರದಿಂದ ರೈತರ ಖಾತೆಗಳಿಗೆ ಜಮೆಯಾಗುವ ಪರಿಹಾರದ ಮೊತ್ತವನ್ನು ಯಾವುದೇ ಕಾರಣಕ್ಕೂ ಸಾಲದ ಖಾತೆಗೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಧಾರವಾಡ ಜಿಲ್ಲೆಯ ಎಲ್ಲಾ ಬ್ಯಾಂಕ್‌ಗಳಿಗೆ ಸ್ಪಷ್ಟ ಮತ್ತು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಅತೀವೃಷ್ಟಿ, ಪ್ರವಾಹ, ಬರ ಪರಿಸ್ಥಿತಿ ಮತ್ತು ಆಲಿಕಲ್ಲು ಮಳೆಯಂತಹ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿ ಅನುಭವಿಸಿದ ಅರ್ಹ ರೈತ ಫಲಾನುಭವಿಗಳಿಗೆ ನಿಯಮಾನುಸಾರ ಬರ ಪರಿಹಾರದ ಮೊತ್ತವನ್ನು ನೇರ ನಗದು ವರ್ಗಾವಣೆ…

