ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಧಾರವಾಡ: ಕರ್ನಾಟಕ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಾಜ್ಯದ ವಿವಿಧ ಮಾಧ್ಯಮ ಸಂಸ್ಥೆಗಳು ಈ ಕೆಳಕಂಡಂತೆ ದತ್ತಿನಿಧಿ ಪ್ರಶಸ್ತಿಗಳನ್ನು ಸ್ಥಾಪಿಸಿವೆ. ಬೆಂಗಳೂರಿನ ಅಭಿಮಾನಿ ಪ್ರಕಾಶನ ಸಂಸ್ಥೆ ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ಅಭಿಮಾನಿ ಪ್ರಶಸ್ತಿ, ಮೈಸೂರಿನ ಮೈಸೂರು ದಿಗಂತ ಪತ್ರಿಕಾ ಸಂಸ್ಥೆ ಮಾನವೀಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ಮೈಸೂರು ದಿಗಂತ ಪ್ರಶಸ್ತಿ, ಬೆಂಗಳೂರಿನ ಅಭಿಮನ್ಯು…

Read More

ಬದುಕಿನ ಮೌಲ್ಯಗಳನ್ನು ತಮ್ಮ ಸಾಹಿತ್ಯದ ಮೂಲಕ ಗಾಢವಾಗಿ ತೋರಿಸಿದವರು ಬೇಂದ್ರೆ: ಡಾ. ಮಲ್ಲಿಕಾ ಘಂಟಿ

ಧಾರವಾಡ: “ಒಬ್ಬ ಕವಿ ಕಾಲಾನಂತರದಲ್ಲಿಯೂ ಇಂದಿನ ಯುವಕರು ಕಥೆ, ಕಾವ್ಯಗಳನ್ನು ಕಟ್ಟುವ ರೀತಿಯಲ್ಲಿ ಬದುಕಿದ್ದರು. ಅವರ ಎಲ್ಲ ಪ್ರಸಂಗಗಳು ಮಾನವೀಯ ನೆಲೆಯೊಳಗೆ ನೆಲೆಸಿರುವಂತವುಗಳು. ಬದುಕಿನ ಮೌಲ್ಯಗಳನ್ನು ಗಾಢವಾಗಿ ತಮ್ಮ ಸಾಹಿತ್ಯದ ಮೂಲಕ ತೋರಿಸಿದವರು ದ.ರಾ.ಬೇಂದ್ರೆಯವರು,” ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ಹೇಳಿದರು. ಅವರು ಮಂಗಳವಾರದಂದು ರಂದು ಧಾರವಾಡದ ಡಾ. ದ.ರಾ. ಬೇಂದ್ರೆ ಭವನದಲ್ಲಿ, ಧಾರವಾಡ ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಆಯೋಜಿಸಿದ್ದ ವರಕವಿ ಡಾ. ದ.ರಾ. ಬೇಂದ್ರೆಯವರ…

Read More

ಭ್ರಷ್ಟಾಚಾರ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ: ಲೋಕಾಯುಕ್ತ ಎಸ್.ಪಿ.

ನವಲಗುಂದ: ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕತೆ ಮತ್ತು ಸತ್ಯನಿಷ್ಠೆಯನ್ನು ಉತ್ತೇಜಿಸುವುದರೊಂದಿಗೆ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಉದ್ದೇಶದಿಂದ, ನವಲಗುಂದದ ಶಂಕರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಾಗೂ ಕರ್ನಾಟಕ ಲೋಕಾಯುಕ್ತ ಧಾರವಾಡ ವಿಭಾಗದ ವತಿಯಿಂದ ಜಂಟಿಯಾಗಿ “ಭ್ರಷ್ಟಾಚಾರ ನಿಗ್ರಹ ಜಾಗೃತಿ ಅರಿವು ಸಪ್ತಾಹ–2025” ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಲೋಕಾಯುಕ್ತ ಎಸ್‌ಪಿ ಪ್ರಭುಲಿಂಗಯ್ಯ ಹಿರೇಮಠ ಅವರು, ಭ್ರಷ್ಟಾಚಾರವು ಸಮಾಜದ ಪ್ರಗತಿಗೆ ದೊಡ್ಡ ಅಡ್ಡಿಯಾಗಿದ್ದು, ಪ್ರತಿಯೊಬ್ಬ ಪ್ರಜೆಯೂ ಎಚ್ಚರದಿಂದಿದ್ದು, ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದಾಗ ಮಾತ್ರ ದೇಶವನ್ನು ಭ್ರಷ್ಟಾಚಾರ…

Read More

ವಿದ್ಯಾರ್ಥಿಗಳು ಮೌಲ್ಯಾಧಾರಿತ ಜೀವನ ರೂಪಿಸಿಕೊಳ್ಳಿ: ಶಾಸಕ ಎನ್.ಹೆಚ್. ಕೋನರಡ್ಡಿ

ನವಲಗುಂದ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್‌ಎಸ್‌ಎಸ್‌, ಭಾರತ ಸ್ಕೌಟ್ ಮತ್ತು ಗೈಡ್ಸ್‌, ಯುವ ರೆಡ್ ಕ್ರಾಸ್‌ ಹಾಗೂ ಇತರೆ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಮಂಗಳವಾರದಂದು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್.ಹೆಚ್. ಕೋನರಡ್ಡಿ ಅವರು, ವಿದ್ಯೆ ಕಲಿತ ಶಾಲಾ-ಕಾಲೇಜುಗಳೇ ದೇವಾಲಯಗಳು ಎಂದು ಹೇಳಿ, ವಿದ್ಯಾರ್ಥಿಗಳು ಕೇವಲ ಅಂಕಗಳ ಸಾಧನೆಗೆ ಮಾತ್ರ ಸೀಮಿತವಾಗದೇ ಮಾನವೀಯತೆ, ಪ್ರೀತಿ ಮತ್ತು ಅನುಕಂಪದಂತಹ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ…

Read More

ಆರ್‌ಎಸ್‌ಎಸ್‌ ನಿಯಂತ್ರಣಕ್ಕೆ ಯತ್ನ: ರಾಜ್ಯ ಸರ್ಕಾರಕ್ಕೆ ಧಾರವಾಡ ಹೈಕೋರ್ಟ್‌ನಿಂದ ಭಾರಿ ಹಿನ್ನಡೆ!

ಧಾರವಾಡ: ಸರ್ಕಾರಿ ಆಸ್ತಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಘಟನೆಗಳ ಚಟುವಟಿಕೆಗಳಿಗೆ ನಿಯಂತ್ರಣ ಹೇರಿ, ಪೂರ್ವಾನುಮತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಮಹತ್ವದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಆದೇಶವು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಚಟುವಟಿಕೆಗಳನ್ನು ನಿಯಂತ್ರಿಸುವ ಗುರಿಯನ್ನು ಹೊಂದಿತ್ತು ಎಂದು ವ್ಯಾಪಕವಾಗಿ ಪರಿಗಣಿಸಲಾಗಿತ್ತು. ಹೈಕೋರ್ಟ್‌ನ ಈ ತೀರ್ಪಿನಿಂದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಧಾರವಾಡ ಪೀಠದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು,…

Read More

ನವಲಗುಂದದ ತಡಹಾಳ ಗ್ರಾಮದಲ್ಲಿ ನೂತನ ಭಾರತ ನಿರ್ಮಾಣ ರಾಜೀವ ಗಾಂಧಿ ಸೇವಾ ಕೇಂದ್ರ ಶಾಸಕ ಎನ್ ಎಚ ಕೊನರಡ್ಡಿಯವರಿಂದ ಲೋಕಾರ್ಪಣೆ

ನವಲಗುಂದ: ತಾಲ್ಲೂಕಿನ ತಡಹಾಳ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮಹಾತ್ಮ ಗಾಂಧಿ ನರೇಗಾ) ಅಡಿಯಲ್ಲಿ ನಿರ್ಮಾಣವಾದ ನೂತನ ಭಾರತ ನಿರ್ಮಾಣ ರಾಜೀವ ಗಾಂಧಿ ಸೇವಾ ಕೇಂದ್ರ ಮತ್ತು ಗ್ರಾಮ ಪಂಚಾಯತ್ ಕಾರ್ಯಾಲಯದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಅದ್ಧೂರಿಯಾಗಿ ನೆರವೇರಿತು. ಗದಗ ಶಿವಾನಂದ ಮಠದ ಪೂಜ್ಯಶ್ರೀ ಜಗದ್ಗುರು ಅಭಿನವ ಶಿವಾನಂದ ಮಹಾಸ್ವಾಮಿಗಳು ಹಾಗೂ ಪೂಜ್ಯಶ್ರೀ ಸದ್ಗುರು ಸಮರ್ಥ ವಿಶ್ವರಾಜೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಶಾಸಕ ಎನ್. ಹೆಚ್. ಕೋನರಡ್ಡಿ ಅವರು ಈ ನೂತನ…

Read More

ಕನ್ನಡ ಜಾಗೃತಿ ಸಮಿತಿ ನೇಮಕ ಯಥಾಪ್ರಕಾರ ಮುಂದುವರಿಸಲು ಸಚಿವ ಸಂತೋಷ್ ಲಾಡ್‌ಗೆ ಮನವಿ

ಧಾರವಾಡ: ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಧಾರವಾಡ ಜಿಲ್ಲಾ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯ ಕನ್ನಡ ಜಾಗೃತಿ ಸಮಿತಿಗೆ ನಾಮನಿರ್ದೇಶನಗೊಂಡ ಸದಸ್ಯರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರನ್ನು ಭೇಟಿ ಮಾಡಿ, ತಮ್ಮ ನೇಮಕಕ್ಕೆ ತಡೆ ಒಡ್ಡಿರುವ ಪತ್ರವನ್ನು ವಾಪಸ್ ಪಡೆದು, ಸಮಿತಿಗಳನ್ನು ಯಥಾವತ್ತಾಗಿ ಮುಂದುವರಿಸಬೇಕೆಂದು ಮನವಿ ಸಲ್ಲಿಸಿದರು. ​ಕನ್ನಡ ಸೇವೆ ಗುರುತಿಸಿ ನೇಮಕ: ​ಸಚಿವರನ್ನು ಭೇಟಿ ಮಾಡಿದ ಸದಸ್ಯರು, “ನಾವು ನಮ್ಮ ನಿತ್ಯದ ಕೆಲಸದ ಜೊತೆಗೆ ದಶಕಗಳಿಂದ ಕನ್ನಡ ಸೇವೆಯಲ್ಲಿ ತೊಡಗಿದ್ದೇವೆ. ನಮ್ಮಲ್ಲಿ ಕೆಲವರು…

Read More

ಪ್ರಕೃತಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಹೊಣೆಗಾರರಾಗಬೇಕು’ – ಡಾ. ಜಿನದತ್ತ ಹಡಗಲಿ

ಧಾರವಾಡ:ಪ್ರಕೃತಿಯು ಪ್ರತಿ ಜೀವಿಗೆ ಅಪಾರ ಕೊಡುಗೆ ನೀಡಿದೆ. ಆದರೆ, ಅದರ ಸದುಪಯೋಗ ಮಾಡಿಕೊಳ್ಳದ ಮಾನವ, ಪ್ಲಾಸ್ಟಿಕ್ ಹಾಗೂ ರಾಸಾಯನಿಕ ಗೊಬ್ಬರಗಳಂತಹ ವಸ್ತುಗಳ ಬಳಕೆಯಿಂದ ತನ್ನನ್ನೇ ತಾನು ಅಧೋಗತಿಗೆ ತಳ್ಳಿಕೊಳ್ಳುತ್ತಿದ್ದಾನೆ. ಇದರಿಂದ ಬರಬಾರದ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾನೆ ಎಂದು ನಿವೃತ್ತ ಪ್ರಾಧ್ಯಾಪಕ ಡಾ. ಜಿನದತ್ತ ಹಡಗಲಿ ಅಭಿಪ್ರಾಯಪಟ್ಟರು. ​ಇಲ್ಲಿಯ ಪರಿಸರ ಭವನದಲ್ಲಿ ಜಿಲ್ಲಾ ಆಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಹಾಗೂ ಹುಬ್ಬಳ್ಳಿ-ಧಾರವಾಡ ನಾಗರಿಕ ಪರಿಸರ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ…

Read More

ಕುಡಿಯುವ ನೀರು ಯೋಜನೆ ವಿಳಂಬ: ಎಲ್ ಆ್ಯಂಡ್ ಟಿ ಕಂಪನಿ ವಿರುದ್ಧ ಕಾನೂನು ಕ್ರಮಕ್ಕೆ ಸರ್ಕಾರಕ್ಕೆ ವರದಿ: ಸಚಿವ ಸಂತೋಷ್ ಲಾಡ್ ಎಚ್ಚರಿಕೆ

ಧಾರವಾಡ: ಜಿಲ್ಲೆಯ ಗ್ರಾಮೀಣ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ಎಲ್ ಆ್ಯಂಡ್ ಟಿ (L&T) ಕಂಪನಿಯು ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ಅನಾನುಕೂಲವಾಗಿದ್ದು, ಸರ್ಕಾರಕ್ಕೂ ತೃಪ್ತಿ ಇಲ್ಲ. ಸಾಕಷ್ಟು ಬಾರಿ ಸಲಹೆ, ಸೂಚನೆ ನೀಡಿದ್ದರೂ ಸುಧಾರಿಸದ ಈ ಕಂಪನಿ ವಿರುದ್ಧ ಮೊಕದ್ದಮೆ ಹೂಡಿ ಕಾನೂನು ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕಾರ್ಮಿಕ ಇಲಾಖೆಯ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್. ಲಾಡ್…

Read More

ಸಮೀಕ್ಷೆ ವೇಳೆ ಗಾಯಗೊಂಡ ಶಿಕ್ಷಕರಿಗೆ ಪರಿಹಾರ, ಸೌಲಭ್ಯಕ್ಕೆ ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭರವಸೆ

ಧಾರವಾಡ:ಜಿಲ್ಲೆಯಲ್ಲಿ ಕೈಗೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಪಘಾತ, ಅನಾರೋಗ್ಯಕ್ಕೆ ಒಳಗಾದ ಸಮೀಕ್ಷೆದಾರ ಶಿಕ್ಷಕರಿಗೆ ಸರ್ಕಾರದಿಂದ ನಿಯಮಾನುಸಾರ ಸೂಕ್ತ ಪರಿಹಾರ ಹಾಗೂ ಅಗತ್ಯ ಸೌಲಭ್ಯಗಳನ್ನು ನೀಡಲು ಮಾನ್ಯ ಮುಖ್ಯಮಂತ್ರಿಗಳಿಗೆ ಶಿಫಾರಸ್ಸು ಮಾಡಿ, ಅಗತ್ಯ ಕ್ರಮ ಕೈಗೊಳ್ಳುವದಾಗಿ ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಭರವಸೆ ನೀಡಿದರು. ಅವರು ಸೋಮವಾರದಂದು (ಅ. 27) ಬೆಳಿಗ್ಗೆ ಜಿಲ್ಲಾ ಪಂಚಾಯತ್ ಆವರಣದಲ್ಲಿ, ಸಮೀಕ್ಷೆ ಸಮಯದಲ್ಲಿ ಆಕಸ್ಮಿಕವಾಗಿ ಅಪಘಾತವಾಗಿ ವಿಶ್ರಾಂತಿಯಲ್ಲಿರುವ…

Read More