ಹದಗೆಟ್ಟ ಮುಮ್ಮಿಗಟ್ಟಿ–ಗರಗ–ಬೈಲಹೊಂಗಲ ರಸ್ತೆ: ದುರಸ್ತಿಗೆ ಸಾಮಾಜಿಕ ಹೋರಾಟಗಾರ ಭೀಮಪ್ಪ ಕಾಸಾಯಿ ಆಗ್ರಹ

ಧಾರವಾಡ :ತಾಲೂಕಿನ ಮುಮ್ಮಿಗಟ್ಟಿ ಕ್ರಾಸ್‌ನಿಂದ ಗರಗ ಮಾರ್ಗವಾಗಿ ಬೈಲಹೊಂಗಲಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಈ ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಸಾಮಾಜಿಕ ಹೋರಾಟಗಾರ ಹಾಗೂ ತಡಕೋಡ ಗ್ರಾಮ ಪಂಚಾಯತ್ ಸದಸ್ಯ ಭೀಮಪ್ಪ ಯ. ಕಾಸಾಯಿ ಅವರು ಲೋಕೋಪಯೋಗಿ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಕೆಲಸ ಆರಂಭಿಸದೇ ಇದ್ದಲ್ಲಿ ರಸ್ತೆ ತಡೆದು ಉಗ್ರ ಹೋರಾಟ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಸೋಮವಾರ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ಅವರಿಗೆ ಮನವಿ ಸಲ್ಲಿಸಿದ ಭೀಮಪ್ಪ ಕಾಸಾಯಿ…

Read More

ವಿಮಾನ ನಿಲ್ದಾಣಗಳಿಗೆ ಕನ್ನಡ ಮಹನೀಯರ ಹೆಸರಿಡಲು ನವೆಂಬರ್ 30 ರ ಗಡುವು: ಸಂಗೊಳ್ಳಿ ರಾಯಣ್ಣ ಸಮಿತಿಯಿಂದ ಬೃಹತ್ ಪ್ರತಿಭಟನೆಗೆ ಕರೆ

ಕುಂದಗೋಳ: ನವ್ಹಂಬರ 30 ರ ಒಳಗಾಗಿ ರಾಜ್ಯದ ನಾಲ್ಕು ಪ್ರಮುಖ ವಿಮಾನ ನಿಲ್ದಾಣಗಳಿಗೆ ಕನ್ನಡದ ಮಹನೀಯರ ಹೆಸರುಗಳನ್ನು ನಾಮಕರಣ ಮಾಡಬೇಕೆಂದು ಒತ್ತಾಯಿಸಿ, ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿಯಿಂದ ತಾಲ್ಲೂಕಿನ ಯರಗುಪ್ಪಿ ಗ್ರಾಮದಲ್ಲಿ ಪ್ರತಿಭಟನೆ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು. ಮಾಜಿ ಸಚಿವ ದಿ.ಸಿ.ಎಸ್. ಶಿವಳ್ಳಿಯವರ ಸಮಾಧಿ ಪಕ್ಕದ ಜಮೀನಿನಲ್ಲಿ ನಡೆದ ಈ ಸಭೆಯಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಮನಸೂರುಮಠದ ಶ್ರೀಗಳಾದ ಬಸವರಾಜ ದೇವರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರ ರಾಣಿ ಚೆನ್ನಮ್ಮ, ಹುಬ್ಬಳ್ಳಿಗೆ ಸಂಗೊಳ್ಳಿ ರಾಯಣ್ಣ, ವಿಜಯಪುರಕ್ಕೆ…

Read More

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

ಧಾರವಾಡ:ನ.17: 2025–26 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಯೋಜನೆಗಳಾದ ಧನಶ್ರೀ, ಚೇತನಾ, ಉದ್ಯೋಗಿನಿ, ಜೊತೆಗೆ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಹಾಗೂ ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಡಿಸೆಂಬರ್ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಮತ್ತು ಧನಶ್ರೀ ಯೋಜನೆಗಳಡಿ ಅರ್ಜಿ ಸಲ್ಲಿಸುವವರು ಆನ್‌ಲೈನ್ ಹಾಗೂ ಆಫ್‌ಲೈನ್ ಎರಡೂ…

Read More

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಧಾರವಾಡ: ನವೆಂಬರ್ 17 – ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನ ನೀಡುವ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಾಗಿ ಆಹ್ವಾನಿಸಿರುವ ಪ್ರಶಸ್ತಿಗಳ ವಿವರ ಹೀಗಿದೆ: ಏಕಲವ್ಯ ಪ್ರಶಸ್ತಿ–2024, ಜೀವಮಾನ ಸಾಧನೆ ಪ್ರಶಸ್ತಿ–2024, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ–2024, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ–2024, ಗುರಿ–ಓಲಂಪಿಕ್ ಪದಕ 2025–2026, ನಗದು ಪುರಸ್ಕಾರ 2023 ಮತ್ತು 2024, ಶೈಕ್ಷಣಿಕ ಶುಲ್ಕ ಮರುಪಾವತಿ 2025–26, ಕ್ರೀಡಾ ವಿದ್ಯಾರ್ಥಿವೇತನ 2025–26….

Read More

ಆನ್‌ಲೈನ್ ವಂಚನೆ, ಸೈಬರ್ ಕ್ರೈಂ ಬಗ್ಗೆ ಸರಕಾರಿ ನೌಕರರು ಜಾಗೃತರಾಗಿರಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ: ಇತ್ತೀಚೆಗೆ ಆನ್‌ಲೈನ್ ಆರ್ಥಿಕ ವಂಚನೆ ಮತ್ತು ಸೈಬರ್ ಅಪರಾಧಗಳು ಹೆಚ್ಚುತ್ತಿರುವುದರಿಂದ ಸಾರ್ವಜನಿಕರು, ವಿಶೇಷವಾಗಿ ಸರ್ಕಾರಿ ನೌಕರರು, ಅವರ ಕುಟುಂಬದವರು ಮತ್ತು ಪಿಂಚಣಿದಾರರು ತೀವ್ರ ಜಾಗೃತಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಕರೆ ನೀಡಿದರು. ನವೆಂಬರ್ 17 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬಾಂಬೆ ಸೆಬಿ (SEBI) ಆಯೋಜಿಸಿದ್ದ ಪ್ರಾದೇಶಿಕ ಹೂಡಿಕೆದಾರರ ಜಾಗೃತಿ ಹಾಗೂ ಆನ್‌ಲೈನ್ ಆರ್ಥಿಕ ವಂಚನೆ ಮತ್ತು ಸೈಬರ್ ಕ್ರೈಂಗಳ ಬಗ್ಗೆ ಸರ್ಕಾರಿ ನೌಕರರಿಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ…

Read More

ಮುಖ್ಯ ವೈದ್ಯಾಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಿರಾ? ಕುಂದಗೋಳ ಆಸ್ಪತ್ರೆಯಲ್ಲಿ ಡೀಸೆಲ್‌ ಕಳ್ಳಾಟ, ಜನರ ಜೀವಕ್ಕೆ ಬೆಲೆಯಿಲ್ಲ!

ಕುಂದಗೋಳ, ಆಡಳಿತದ ಅಧಃಪತನ:ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ವಿದ್ಯುತ್ ಕಡಿತವಾದಾಗ ಪರ್ಯಾಯ ವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದ್ದರಿಂದ, ತುರ್ತು ಚಿಕಿತ್ಸೆಗೆ ಬಂದ ರೋಗಿಗಳಿಗೆ ವೈದ್ಯರು ಸಂಬಂಧಿಕರ ಮೊಬೈಲ್ ಫೋನ್ ಟಾರ್ಚ್ ಬೆಳಕಿನಲ್ಲಿ ಹೊಲಿಗೆ ಹಾಕಿದ ಘಟನೆಯು ರಾಜ್ಯದ ಆರೋಗ್ಯ ಇಲಾಖೆಯ ಮುಖಕ್ಕೆ ಮಸಿ ಬಳಿದಿದೆ. ಕೋಟ್ಯಂತರ ರೂಪಾಯಿ ಅನುದಾನ ಪಡೆಯುವ ಆಸ್ಪತ್ರೆಯಲ್ಲಿ ಕನಿಷ್ಠ 20 ಲೀಟರ್ ಡೀಸೆಲ್ ಸಂಗ್ರಹಿಸಿಡಲು ಸಾಧ್ಯವಾಗದಿರುವುದು, ಸಾರ್ವಜನಿಕರ ಜೀವದ ಹಕ್ಕನ್ನು ತುಳಿದು ನಡೆದ ನಾಚಿಕೆಗೇಡಿನ ನಡೆಯಾಗಿರುವ ಅಧಿಕಾರಿಗಳ ಕರ್ತವ್ಯ ಲೋಪದ…

Read More

(ಕೆಯುಡಬ್ಲ್ಯೂಜೆ) ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ನೂತನವಾಗಿ ಅವಿರೋಧವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಶನಿವಾರ ಹುಬ್ಬಳ್ಳಿಯ ಪ್ರಜಾವಾಣಿ ಕಾರ್ಯಾಲಯದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ನೂತನ ಪದಾಧಿಕಾರಿಗಳ ಸನ್ಮಾನ:ಸಂಘದ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹುಬ್ಬಳ್ಳಿ ಆವೃತ್ತಿಯ ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಸಹಾಯಕ ಸುದ್ದಿ ಸಂಪಾದಕರಾದ ಶ್ರೀ ಬಸವರಾಜ (ರಾಜು) ಬಿಜಾಪುರ ಅವರನ್ನು ಗೌರವಿಸಲಾಯಿತು. ಅದೇ ರೀತಿ, ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಮುಖ್ಯ ಉಪಸಂಪಾದಕರಾದ ಶ್ರೀಮತಿ ರೂಪಾ ಕೊಡದ ಹಾಗೂ ಕಲಘಟಗಿ…

Read More

2025-26 ನೇ ಸಾಲಿನ ಬಿಳಿ ಜೋಳ ಖರೀದಿಗೆ ನೋಂದಣಿ ಪ್ರಾರಂಭ

ಧಾರವಾಡ: 2025-26 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಋತುವಿನ ಬಿಳಿ ಜೋಳಕ್ಕೆ ಬೆಂಬಲ ಬೆಲೆ ಘೋಷಿಸಿದ್ದು, ಜಿಲ್ಲೆಯಲ್ಲಿ ಬಿಳಿ ಜೋಳ ಖರೀದಿಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಖರೀದಿ ಏಜೆನ್ಸಿಯಾಗಿ ನೇಮಕವಾಗಿದೆ. ಜಿಲ್ಲೆಯಲ್ಲಿ ಐದು ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಬಿಳಿ ಜೋಳ (ಹೈಬ್ರಿಡ್) ಪ್ರತಿ ಕ್ವಿಂಟಲ್‌ಗೆ ರೂ. 3,699 ಹಾಗೂ ಬಿಳಿ ಜೋಳ ಮಾಲ್ದಂಡಿ ಪ್ರತಿ ಕ್ವಿಂಟಲ್‌ಗೆ ರೂ. 3,749 ರಂತೆ ದರ ನಿಗದಿ ಪಡಿಸಲಾಗಿದೆ. ಧಾರವಾಡ ಜಿಲ್ಲೆಯ ಧಾರವಾಡ, ಹುಬ್ಬಳ್ಳಿ, ನವಲಗುಂದ,…

Read More

ಧಾರವಾಡದಲ್ಲಿ ಜಪಾನ್ ನೈಡೆಕ್ ಕಂಪನಿಯ ₹600 ಕೋಟಿ ಆರ್ಚರ್ಡ್ ಹಬ್ ಉದ್ಘಾಟನೆ

ಧಾರವಾಡ ನ.15: ಇಲ್ಲಿನ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಜಪಾನ್ ಮೂಲದ ನೈಡೆಕ್ ಕಂಪನಿಯು 600 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಿರುವ ಆರ್ಚರ್ಡ್ ಹಬ್‍ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಶುಕ್ರವಾರ (ನ.14) ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೈಡೆಕ್ ಕಂಪನಿಯ ಈ ಸಂಸ್ಥೆಯ ಸ್ಥಾಪನೆಗೆ ಐದು ತಿಂಗಳ ಹಿಂದೆ ನಾನೇ ಭೂಮಿಪೂಜೆ ನೆರವೇರಿಸಿದ್ದೆ. ಕಂಪನಿಯು ಕೇಳಿದ್ದ ಸವಲತ್ತುಗಳನ್ನೆಲ್ಲ ರಾಜ್ಯ ಸರಕಾರವು ತ್ವರಿತವಾಗಿ ಪೂರೈಸಿದೆ. ಇದಕ್ಕೆ ತಕ್ಕಂತೆ ಕಂಪನಿಯು…

Read More

ಧಾರವಾಡದ ಗ್ರಾಮೀಣ ಬಿ.ಎಡ್ ಕಾಲೇಜಿನ ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ: ಸಹನಾ ಮರಾಠಿ ಪ್ರಥಮ ಸ್ಥಾನ

ಧಾರವಾಡ ಸತ್ತೂರು:ಶ್ರೀ ಬಸವೇಶ್ವರ ಗ್ರಾಮೀಣ ಶಿಕ್ಷಣ ಮತ್ತು ಅಭಿವೃದ್ಧಿ ಟ್ರಸ್ಟ್ (ರಿ.) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಬಿ.ಎಡ್ ಕಾಲೇಜು, ಸತ್ತೂರು, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ ಇತ್ತೀಚೆಗೆ ಪ್ರಕಟಿಸಿದ 2024-25ರ ಬಿ.ಎಡ್ 4ನೇ ಸೆಮಿಸ್ಟರ್ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. ವಿದ್ಯಾರ್ಥಿಗಳು ತೋರಿದ ಈ ಶೈಕ್ಷಣಿಕ ಉತ್ಕೃಷ್ಟತೆಗೆ ಕಾಲೇಜು ಹೆಮ್ಮೆ ವ್ಯಕ್ತಪಡಿಸಿದೆ. ಕಾಲೇಜಿನ ವಿದ್ಯಾರ್ಥಿಗಳು ಶೇಕಡಾವಾರು ಅಂಕಗಳನ್ನು ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿನಿ ಸಹನಾ ಮರಾಠಿ ಅವರು ಶೇ. 94.83ರಷ್ಟು ಅಂಕಗಳನ್ನು ಗಳಿಸುವ ಮೂಲಕ ಪ್ರಥಮ ಸ್ಥಾನವನ್ನು…

Read More