​ಹಿಂದೂ ಸ್ವರಾಜ್ಯ ಸ್ಥಾಪಿಸಿದ ಛತ್ರಪತಿ ಶಿವಾಜಿ ಮಹಾರಾಜರ ಕಾರ್ಯ ಸ್ಮರಣೀಯ: ನವಲಗುಂದದಲ್ಲಿ ಜನ ಜಾಗೃತಿ ಮಹಾ ಸಮಾವೇಶ

ನವಲಗುಂದ: ಛತ್ರಪತಿ ಶಿವಾಜಿ ಮಹಾರಾಜರು ಮುಸ್ಲಿಂ ಮತಾಂತರದ ವಿರುದ್ಧ ಹೋರಾಡಲು ಸಾಮಾನ್ಯ ಜನರನ್ನು ಸಂಘಟಿಸಿ, ಅವರನ್ನು ಬಲಿಷ್ಠ ಸೈನಿಕರನ್ನಾಗಿ ಪರಿವರ್ತಿಸುವ ಮೂಲಕ 1674ರಲ್ಲಿ ‘ಹಿಂದೂ ಸ್ವರಾಜ್ಯ’ವನ್ನು ಸ್ಥಾಪಿಸಿದರು. ಇಡೀ ಹಿಂದೂ ಧರ್ಮವನ್ನು ಒಗ್ಗೂಡಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಆರ್‌ಎಸ್‌ಎಸ್ ಮುಖಂಡ ವಿನಾಯಕ ಕೆಲಗೇರಿ ಹೇಳಿದರು. ​ತಾಲೂಕಿನ ಮೊರಬ, ತಲೆಮೊರಬ, ಗುಮ್ಮಗೋಳ, ಶಿರೂರ ಹಾಗೂ ಆಯಟ್ಟಿ ಗ್ರಾಮಗಳ ಸಂಯೋಗದಲ್ಲಿ ಆಯೋಜಿಸಲಾಗಿದ್ದ ‘ಹಿಂದೂ ಜನ ಜಾಗೃತಿ ಮಹಾ ಸಮಾವೇಶ’ದಲ್ಲಿ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡುತ್ತಿದ್ದರು. ಜಗತ್ತಿನ ನೂರಾರು ರಾಷ್ಟ್ರಗಳಿಗೆ…

Read More

​ಗುಡಿಸಾಗರ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ

ನವಲಗುಂದ: ತಾಲೂಕಿನ ಗುಡಿಸಾಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26ನೇ ಸಾಲಿನ ಶಾಲಾ ವಾರ್ಷಿಕೋತ್ಸವ, 7ನೇ ತರಗತಿ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ಹಾಗೂ ಮಹಾಸರಸ್ವತಿ ಪೂಜೆ ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ವಿಜೃಂಭಣೆಯಿಂದ ಜರುಗಿದವು. ​ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್‌ಡಿಎಂಸಿ ಅಧ್ಯಕ್ಷ ವೀರಣ್ಣ ಗುಳೇದ ಅವರು ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಯುವ ಮುಖಂಡ ಫಕ್ಕೀರೇಶ ಪಡೇಸೂರ ಅವರು ಮಾತನಾಡಿ, ಇಂದಿನ ಮಕ್ಕಳೇ ಮುಂದಿನ ಭಾರತದ ಸತ್ಪ್ರಜೆಗಳು….

Read More

ಧಾರವಾಡ ಜಿಲ್ಲೆಯಲ್ಲಿ ನೂತನ ಪಿಯು ಕಾಲೇಜುಗಳ ಆರಂಭಕ್ಕೆ ಅರ್ಜಿ ಆಹ್ವಾನ: ಏಪ್ರಿಲ್ 30 ಕೊನೆಯ ದಿನ

ಧಾರವಾಡ: ಜಿಲ್ಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನಿಂದ ಹೊಸದಾಗಿ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಆಸಕ್ತಿ ಇರುವ ಸಂಸ್ಥೆಗಳಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ. ಶೈಕ್ಷಣಿಕ ಅಭಿವೃದ್ಧಿಯ ದೃಷ್ಟಿಯಿಂದ ಹೊಸ ಕಾಲೇಜುಗಳ ಸ್ಥಾಪನೆಗೆ ಅವಕಾಶ ಕಲ್ಪಿಸಲಾಗಿದ್ದು, ನಿಗದಿತ ಮಾರ್ಗಸೂಚಿಗಳನ್ನು ಅನುಸರಿಸುವ ಸಂಸ್ಥೆಗಳು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದೆ. ​ಅರ್ಜಿ ಸಲ್ಲಿಸಲು ಇಚ್ಛಿಸುವ ಆಸಕ್ತರು ಇಲಾಖೆಯ ಅಧಿಕೃತ ವೆಬ್‌ಸೈಟ್ https://pue.karnataka.gov.in/ ಮೂಲಕ ಏಪ್ರಿಲ್ 30, 2026ರ ಒಳಗೆ ತಮ್ಮ ಅರ್ಜಿಯನ್ನು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬೇಕು….

Read More

ಧಾರವಾಡದ ಭಾರತೀಯ ಕ್ರೀಡಾ ಪ್ರಾಧಿಕಾರ ಕೇಂದ್ರದಲ್ಲಿ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ: ಫೆ. 23 ರಿಂದ 25 ರವರೆಗೆ ಆಯೋಜನೆ

ಧಾರವಾಡ: ಇಲ್ಲಿನ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ತರಬೇತಿ ಕೇಂದ್ರವು ಬಾಸ್ಕೆಟ್ ಬಾಲ್, ಕುಸ್ತಿ ಮತ್ತು ಕಬಡ್ಡಿ ಕ್ರೀಡೆಗಳಲ್ಲಿ ಹೊಸ ಕ್ರೀಡಾಪಟುಗಳನ್ನು ಗುರುತಿಸಲು ಇದೇ ಫೆಬ್ರವರಿ 23 ರಿಂದ 25 ರವರೆಗೆ ಮೂರು ದಿನಗಳ ಕಾಲ ಆಯ್ಕೆ ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ​ಆಯ್ಕೆ ಪ್ರಕ್ರಿಯೆಯ ವೇಳಾಪಟ್ಟಿಯಂತೆ, ಫೆಬ್ರವರಿ 23 ರಂದು ಬಾಸ್ಕೆಟ್ ಬಾಲ್ ಮತ್ತು ಕುಸ್ತಿ ಕ್ರೀಡೆಗಳಿಗೆ ಹಾಗೂ ಫೆಬ್ರವರಿ 24 ಮತ್ತು 25 ರಂದು ಕಬಡ್ಡಿ ಕ್ರೀಡೆಗೆ ಆಯ್ಕೆಗಳು ನಡೆಯಲಿವೆ. ಈ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಲು ಬಯಸುವ 13…

Read More

ರೈತರಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಸಿ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕಟ್ಟುನಿಟ್ಟಿನ ಸೂಚನೆ

ಧಾರವಾಡ: ಜಿಲ್ಲೆಯಲ್ಲಿ ಬೇಸಿಗೆ ಅವಧಿ ಆರಂಭವಾಗುತ್ತಿರುವುದರಿಂದ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡ್ಡಿಯಾಗದಂತೆ ಹೆಸ್ಕಾಂ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಸರ್ಕಾರದ ನಿಯಮದಂತೆ ರೈತರ ಪಂಪ್‌ಸೆಟ್‌ಗಳಿಗೆ ಪ್ರತಿದಿನ ಕಡ್ಡಾಯವಾಗಿ 7 ಗಂಟೆಗಳ ಕಾಲ ವಿದ್ಯುತ್ ಪೂರೈಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ​ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ನಡೆದ ಹೆಸ್ಕಾಂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಕಲಘಟಗಿ, ಅಳ್ನಾವರ ಸೇರಿದಂತೆ ವಿವಿಧ…

Read More

ತಡಕೋಡ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮಿಲನ: ಸಾಂಸ್ಕೃತಿಕ ವೈಭವದೊಂದಿಗೆ ಯಶಸ್ವಿ ಸಮಾರೋಪ

ತಡಕೋಡ: ಇಲ್ಲಿನ ಸ್ಥಳೀಯ ಶಾಲೆಯು ಜ್ಞಾನಾರ್ಜನೆಯ ಹಾದಿಯಲ್ಲಿ ಮತ್ತೊಂದು ಯಶಸ್ವಿ ವರ್ಷವನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ “ವಾರ್ಷಿಕ ಸ್ನೇಹ ಸಮ್ಮಿಲನ ಮತ್ತು ಸಾಂಸ್ಕೃತಿಕ ವೈಭವ” ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಜರುಗಿತು. ​ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಡಿವೈಎಸ್‌ಪಿ ವಿನೋದ ಮುಕ್ತೇದಾರ ಅವರು, ತಾವು ಬಾಲ್ಯದಲ್ಲಿ ಬಡತನದ ಬೇಗೆಯ ನಡುವೆಯೇ ಶಿಕ್ಷಣ ಪಡೆದು ಇಂದು ಪೊಲೀಸ್ ಅಧಿಕಾರಿಯಾಗಿರುವುದನ್ನು ಸ್ಮರಿಸಿದರು. ಸಂಕಷ್ಟಗಳು ಎಂದಿಗೂ ಸಾಧನೆಗೆ ಅಡ್ಡಿಯಾಗುವುದಿಲ್ಲ; ವಿದ್ಯಾರ್ಥಿಗಳಲ್ಲಿ ದೃಢಸಂಕಲ್ಪ ಮತ್ತು ಕಠಿಣ ಪರಿಶ್ರಮವಿದ್ದರೆ ಯಾವುದೇ ಉನ್ನತ ಗುರಿಯನ್ನು ತಲುಪಲು…

Read More

ಅನ್ನದಾನ ಮಹಾಪುಣ್ಯದ ಕೆಲಸವಾಗಿದೆ – ಶ್ರೀ ಸಿದ್ದರಾಮದೇವರು

ನವಲಗುಂದ: ಅನ್ನದಾನ ಮಹಾ ಪುಣ್ಯದ ಕೆಲಸವಾಗಿದೆ ಅದನ್ನು ಜೀವನದಲ್ಲಿ ಗುರಿಯಾಗಿಸಿಕೊಂಡು ಶ್ರೀ ಮಠದಲ್ಲಿ ವೀರಬಸವ ದೇವರು ಆರಂಭ ಮಾಡಿದ್ದು ಬಹಳ ಸಂತೋಷ ತಂದಿದೆ ಎಂದು ಶಿರಹಟ್ಟಿಯ ಫಕ್ಕಿರೇಶ ಮಠದ ಫಕ್ಕೀರ ಸಿದ್ದರಾಮದೇವರು ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಶ್ರೀ ಸಂಸ್ಥಾನ ಪಂಚಗ್ರಹ ಹಿರೇಮಠದಲ್ಲಿ ಶ್ರೀ ಸಿದ್ದೇಶ್ವರ ಪ್ರಸಾದ ನಿಲಯ ಉದ್ಘಾಟನೆ ಮಾಡಿ ಮಾತನಾಡಿದ ಅವರು ಜಗದ್ಗುರುಗಳ ಆಶೀರ್ವಾದದಿಂದ ಇನ್ನಷ್ಟು ಕಾರ್ಯಕ್ರಮಗಳು ಈ ಪಂಚಗ್ರಹ ಹಿರೇಮಠದಲ್ಲಿ ನಡೆಯಲಿ, ನೂತನ ಪೀಠಾಧಿಕಾರಿಗಳ ಮೇಲೆ ಶಿರಹಟ್ಟಿಯ ಶ್ರೀಗಳ ಆಶೀರ್ವಾದ ಯಾವತ್ತೂ ಇರುತ್ತೆ ಎಂದರು….

Read More

ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳನ್ನು ಮಾರ್ಚ ಅಂತ್ಯದೊಳಗೆ ಪೂರ್ಣಗೊಳಿಸಬೇಕು:ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ

ಧಾರವಾಡ: ಫೆ.19: ಬೇಸಿಗೆ ಕಾಲ ಪ್ರಾರಂಭವಾಗುತ್ತೀರುವದರಿಂದ ಗ್ರಾಮೀಣ ಭಾಗದಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆಯಾಗದಂತೆ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಬೇಕು. ಮತ್ತು ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳನ್ನು ನಿಯಮಾನುಸಾರ ಬರುವ ಮಾರ್ಚ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಹೇಳಿದರು. ಅವರು ಇಂದು (ಫೆ. 19) ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ…

Read More

ಶಿವಾಜಿ ಮಹಾರಾಜರ ಆಡಳಿತದಲ್ಲಿ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸಹಿಷ್ಣುತೆ ಮಾದರಿಯಾಗಿತ್ತು: ವಿಧಾನ ಪರಿಷತ್ ಶಾಸಕ ಎಫ್.ಎಚ್.ಜಕ್ಕಪ್ಪನವರ

ಧಾರವಾಡ:ಫೆ.19: ಛತ್ರಪತಿ ಶಿವಾಜಿ ಮಹಾರಾಜರು ಕೇವಲ ಒಬ್ಬ ಶೂರ ಯೋಧರು ಮಾತ್ರವಲ್ಲದೇ, ಇಡೀ ಸಮಾಜಕ್ಕೆ ದಾರಿ ತೋರಿದ ಸಾಮಾಜಿಕ ಹರಿಕಾರರು. ತಮ್ಮ ಆಡಳಿತದಲ್ಲಿ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸಹಿಷ್ಣುತೆಯನ್ನು ಮೆರೆಯುವ ಮೂಲಕ ಉತ್ತಮ ಸಮಾಜ ನಿರ್ಮಾಣದ ದಿಕ್ಕಿನಲ್ಲಿ ಹೆಜ್ಜೆ ಇಟ್ಟವರು ಎಂದು ವಿಧಾನ ಪರಿಷತ್ ಶಾಸಕರಾದ ಎಫ್.ಎಚ್.ಜಕ್ಕಪ್ಪನವರ ಅವರು ಹೇಳಿದರು. ಅವರು ಇಂದು (ಫೆ.19) ಮಧ್ಯಾಹ್ನ ಭಾರತ ಪ್ರೌಢಶಾಲಾ ಆವರಣದಲ್ಲಿರುವ ಮರಾಠ ವಿದ್ಯಾ ಪ್ರಸಾರಕ ಮಂಡಳದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ…

Read More

ಸುಧಾ ಪ್ರಕಾಶ ಪಟ್ಟಣಶೆಟ್ಟಿ ಸಿವಿಲ್ ನ್ಯಾಯಾಧೀಶರಾಗಿ ನೇಮಕ: ಗುರುಕುಲ ಸಂಸ್ಥೆಯಿಂದ ಸನ್ಮಾನ

ನವಲಗುಂದ: ಬ್ಯಾಲಿಳ ಗ್ರಾಮದ ತಾಲೂಕಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಪ್ರಗತಿಪರ ರೈತರಾದ ದಿ. ಪ್ರಕಾಶ ಪಟ್ಟಣಶೆಟ್ಟಿ ಅವರ ಪುತ್ರಿ ಸುಧಾ ಪ್ರಕಾಶ ಪಟ್ಟಣಶೆಟ್ಟಿ ಅವರು ಸಿವಿಲ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುಕುಲ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ದೇವರಾಜ್ ಬಿ. ದಾಡಿಬಾವಿ ಅವರು ಅವರನ್ನು ಸನ್ಮಾನಿಸಿದರು. ಸನ್ಮಾನ ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಗುರಪ್ಪ ಈರೆಶನವರ, ಉಮೇಶ ಧಾರವಾಡ, ಪರಮೇಶ್ವರ ಪಟ್ಟಣಶೆಟ್ಟಿ, ಸಂಗಮೇಶ ಮುತ್ತಗಿ, ಬಸನಗೌಡ ಪಾಟೀಲ, ಬಸವರಾಜ ಸವದಿ, ರಾಜಣ್ಣ ಶಿವಪ್ಪಯ್ಯನವರ, ಗಂಗಪ್ಪ ತಳವಾರ, ಈರಣ್ಣ…

Read More