ಎಸ್‌ಸಿ-ಎಸ್‌ಟಿ, ಫೋಕ್ಸೊ ಪ್ರಕರಣಗಳ ತ್ವರಿತ ವಿಲೇವಾರಿಗೆ ಕ್ರಮ ಕೈಗೊಳ್ಳಿ: ಎಫ್.ಎಚ್. ಜಕ್ಕಪ್ಪನವರ
ಧಾರವಾಡ, ಜೂ.30: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ಪ್ರಕರಣಗಳು, ಫೋಕ್ಸೊ ಪ್ರಕರಣಗಳು ಸೇರಿದಂತೆ ನ್ಯಾಯಾಲಯ ಹಾಗೂ ತನಿಖಾ ಹಂತದಲ್ಲಿರುವ ಎಲ್ಲ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಎಫ್.ಎಚ್. ಜಕ್ಕಪ್ಪನವರ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ನೂತನ ಸಭಾಭವನದಲ್ಲಿ ಮಂಗಳವಾರ ನಡೆದ 2026ನೇ ಸಾಲಿನ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಎರಡನೇ ತ್ರೈಮಾಸಿಕ ಸಭೆ ಹಾಗೂ ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ…

