ಮತ್ತಿಗಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಪೋಷಕ–ಶಿಕ್ಷಕರ ಮಹಾಸಭೆ

ಮತ್ತಿಗಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಪೋಷಕ–ಶಿಕ್ಷಕರ ಮಹಾಸಭೆ ಕುಂದಗೋಳ, ನ.14:ಮತ್ತಿಗಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು (14-11-2025) ಮಕ್ಕಳ ದಿನಾಚರಣೆಯನ್ನು ಆಚರಿಸುವ ಭಾಗವಾಗಿ ಪೋಷಕ–ಶಿಕ್ಷಕರ ಮಹಾಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಈ ವೇಳೆ ಶಿಕ್ಷಣದ ಹಕ್ಕು, ಬಾಲ್ಯ ವಿವಾಹ ತಡೆ, ಪೋಕ್ಸೋ ಕಾಯ್ದೆ, ಸಮನ್ವಯ ಶಿಕ್ಷಣ, ದಾಖಲಾತಿ ಆಂದೋಲನ, ಹಾಜರಾತಿ ಮತ್ತು ಮಕ್ಕಳ ಸರ್ವತೋಮುಖ ಅಭಿವೃದ್ಧಿ ಕುರಿತ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಗುರುಮಾತೆಯರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು…

Read More

ನವಲಗುಂದ: ಕಾಲವಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕ–ಶಿಕ್ಷಕರ ಮಹಾಸಭೆ ಯಶಸ್ವಿ

ನವಲಗುಂದ: ಕಾಲವಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕ–ಶಿಕ್ಷಕರ ಮಹಾಸಭೆ ಯಶಸ್ವಿ ನವಲಗುಂದ: ಕಾಲವಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರದಂದು ನಡೆದ ಪೋಷಕ–ಶಿಕ್ಷಕರ ಮಹಾಸಭೆ ವಿದ್ಯಾರ್ಥಿಗಳ ಪ್ರಾರ್ಥನೆ ಮತ್ತು ಪ್ರತಿಯೊಬ್ಬ ಪಾಲಕರಿಗೂ ಲೇಖನಿಯನ್ನು ನೀಡಿ ಸ್ವಾಗತಿಸುವ ವಿಶೇಷ ಕಾರ್ಯಕ್ರಮದೊಂದಿಗೆ ಭವ್ಯವಾಗಿ ಆರಂಭವಾಯಿತು. ಕಾರ್ಯಕ್ರಮವು ಉತ್ತಮ ಸಂಯೋಜನೆಯಲ್ಲೇ ಯಶಸ್ವಿಯಾಗಿ ನೆರವೇರಿತು. ಶಾಲೆಯ ಶಿಕ್ಷಕರಾದ ಜಿ.ವಿ. ಪಾಟೀಲ ಗುರುಗಳು ಸರ್ಕಾರದ ವಿವಿಧ ಕಲ್ಯಾಣ ಮತ್ತು ಶಿಕ್ಷಣ ಸಂಬಂಧಿತ ಯೋಜನೆಗಳ ಬಗ್ಗೆ ಪಾಲಕರಿಗೆ ವಿವರವಾಗಿ ತಿಳಿಸಿದರು. ಅತಿಥಿ ಶಿಕ್ಷಕರಾದ ಬಾಪು…

Read More

ಜಿಲ್ಲಾ ಪೊಲೀಸ್ ಕಚೇರಿಗೆ ಪೊಲೀಸ್ ಮಹಾನಿರೀಕ್ಷಕ ವಿಕಾಸ್ ಕುಮಾರ ವಿಕಾಸ್ ಭೇಟಿ

ಜಿಲ್ಲಾ ಪೊಲೀಸ್ ಕಚೇರಿಗೆ ಪೊಲೀಸ್ ಮಹಾನಿರೀಕ್ಷಕ ವಿಕಾಸ್ ಕುಮಾರ ವಿಕಾಸ್ ಭೇಟಿ ಧಾರವಾಡ: ನ.14 ಜಿಲ್ಲಾ ಪೊಲೀಸ್ ಘಟಕದ ಪರಿವೀಕ್ಷಣೆಯ ಅಂಗವಾಗಿ, ನಿನ್ನೆ (ನ.13) ಬೆಂಗಳೂರು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾದ ವಿಕಾಸ್ ಕುಮಾರ ವಿಕಾಸ್ ಅವರು ಧಾರವಾಡ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ, ಗೌರವ ರಕ್ಷೆಯನ್ನು ಸ್ವೀಕರಿಸಿದರು. ನಂತರ ಅವರು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಿವಿಧ ಇಲಾಖೆಗಳ ಕಡತಗಳನ್ನು ಪರಿಶೀಲಿಸಿದರು. ಜಿಲ್ಲಾ ವಿಶೇಷ ಘಟಕ ಹಾಗೂ ಜಿಲ್ಲೆಯ ಸಾಮಾಜಿಕ…

Read More

ಮಕ್ಕಳ ದಿನಾಚರಣೆ ಅಂಗವಾಗಿ ಜರುಗಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ವಿತರಣೆ: ಧಾರವಾಡದಲ್ಲಿ ಸಂಭ್ರಮ ಕಾರ್ಯಕ್ರಮ

ಧಾರವಾಡ ನ.14:ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ, ಧಾರವಾಡ ಜಿಲ್ಲಾ ಬಾಲಭವನ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 12ರಂದು ಮಕ್ಕಳ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಹಲವು ಸ್ಪರ್ಧೆಗಳು ಜರುಗಿದ್ದು, ವಿಜೇತರಿಗೆ ಪ್ರಶಸ್ತಿ ವಿತರಣಾ ಸಮಾರಂಭವನ್ನು ವೈಭವವಾಗಿ ಆಚರಿಸಲಾಯಿತು. ಮಕ್ಕಳಿಗಾಗಿ ಸೃಜನಾತ್ಮಕ ಕಲೆ, ಬರವಣಿಗೆ, ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ವಾದ್ಯ ಸಂಗೀತ, ಯಕ್ಷಗಾನ,…

Read More

ಪ್ರವಾಸೋದ್ಯಮ ಇಲಾಖೆಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ

ಧಾರವಾಡ: ನ.14: ಪ್ರವಾಸಿ ತಾಣಗಳ ಉತ್ತೇಜನ ಮತ್ತು ಪ್ರಚಾರದ ದೃಷ್ಠಿಯಿಂದ ಎಸ್.ಸಿ.ಎಸ್.ಪಿ. ಮತ್ತು ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ ವಿವಿಧ ತರಬೇತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರವಾಸಿ ಮಾರ್ಗದರ್ಶನ ತರಬೇತಿ: ಧಾರವಾಡ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪದವಿ ಹಾಗೂ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 48 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಪ್ರವಾಸಿ ಮಾರ್ಗದರ್ಶನ ತರಬೇತಿಗೆ ಅರ್ಜಿ ಸಲ್ಲಿಸಬಹುದು. ಆತಿಥ್ಯ ಕ್ಷೇತ್ರದಲ್ಲಿ…

Read More

ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಹಾಗೂ ದತ್ತು ಮಾಸಾಚರಣೆ: ಧಾರವಾಡದಲ್ಲಿ ಕಾನೂನು ಅರಿವು–ನೆರವು ಕಾರ್ಯಕ್ರಮ

ಧಾರವಾಡ, ನ.14: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಡಾ. ಬಿ.ಆರ್. ಅಂಬೇಡ್ಕರ್ ಎಜ್ಯುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಪೊಲೀಸ್ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಹಾಗೂ ರಾಷ್ಟ್ರೀಯ ದತ್ತು ಮಾಸಾಚರಣೆ–2025 ಅಂಗವಾಗಿ ಕಾನೂನು ಅರಿವು–ನೆರವು ಕಾರ್ಯಕ್ರಮವನ್ನು ಬುದ್ಧ ರಕ್ಷೀತ ವಸತಿ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರುಶುರಾಮ್ ಎಫ್. ದೊಡ್ಡಮನಿ…

Read More

ನವಭಾರತ ನಿರ್ಮಾಣಕ್ಕೆ ನೆಹರು ಅವರ ಕೊಡುಗೆ ಅನನ್ಯ: ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ

ಧಾರವಾಡ, ನ.14: ದೇಶದ ಮೊದಲ ಪ್ರಧಾನಿಯಾಗಿರುವ ಪಂಡಿತ ಜವಾಹರಲಾಲ ನೆಹರು ಅವರು ನವ ಭಾರತದ ನಿರ್ಮಾಣಕ್ಕೆ ಅಡಿಪಾಯ ಹಾಕಿದ ದೀರ್ಘದೃಷ್ಟಿಯ ನಾಯಕರು. ಅವರ ಆದರ್ಶಗಳು ಸದಾಕಾಲ ನಮ್ಮೆಲ್ಲರಿಗೂ ಪ್ರೇರಣೆ. ಮಕ್ಕಳನ್ನು ಅಪಾರವಾಗಿ ಪ್ರೀತಿಸಿದ್ದ ನೆಹರು ಅವರು ತಮ್ಮ ಜನ್ಮದಿನವನ್ನು ದೇಶದ ಮಕ್ಕಳಿಗಾಗಿ ಸಮರ್ಪಿಸಿದರು. ಮಕ್ಕಳೇ ನಾಡಿನ ನಾಳಿನ ಭವಿಷ್ಯ, ಆಶಾಕಿರಣ. ಅವರ ಶ್ರೇಯೋಭಿವೃದ್ಧಿಗಾಗಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಸದಾ ಬದ್ಧವಾಗಿದೆ,” ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು. ಅವರು ಶುಕ್ರವಾರದಂದು (ನ.14) ಕರ್ನಾಟಕ…

Read More

ಕುಂದಗೋಳದಲ್ಲಿ ನಾಳೆ ತಾಲೂಕು 6ನೇ ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ

ಕುಂದಗೋಳ: ಕಲ್ಯಾಣಪುರ ಬಸವಣ್ಣಜ್ಜನವರ ಕಲ್ಯಾಣ ಮಂಟಪದಲ್ಲಿ ತಾಲೂಕು 6ನೇ ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ ನವೆಂಬರ್ 15ರಂದು ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಗಾಳಿ ಮರೆಮ್ಮ ದೇವಾಲಯದಿಂದ ಆರಂಭವಾಗುವ ಭುವನೇಶ್ವರಿದೇವಿಯ ಭಾವಚಿತ್ರ ಮೆರವಣಿಗೆಗೆ ಮಾಜಿ ಶಾಸಕ ಹಾಗೂ ರಾಜ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಅಕ್ಕಿ ಚಾಲನೆ ನೀಡಲಿದ್ದಾರೆ ಎಂದು ತಾಲೂಕು ಕಚುಸಾಪ ಅಧ್ಯಕ್ಷ ವೈ.ಡಿ. ಹೊಸೂರ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಕನ್ನಡ ತೇರಿನ ಮೆರವಣಿಗೆಯು ಕಲ್ಯಾಣ ಮಂಟಪಕ್ಕೆ ಆಗಮಿಸಿದ ಬಳಿಕ ಸಮ್ಮೇಳನದ…

Read More

ಅಪಘಾತಕ್ಕೀಡಾದ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು: ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಮಾನವೀಯ ಸ್ಪಂದನೆಗೆ ಮೆಚ್ಚುಗೆ

👩‍⚕️ ಅಪಘಾತಕ್ಕೀಡಾದ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು: ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಮಾನವೀಯ ಸ್ಪಂದನೆಗೆ ಮೆಚ್ಚುಗೆ ಧಾರವಾಡ: ನ.12: ಹಿಂದುಳಿದ ವರ್ಗಗಳ ಆಯೋಗದ ಆದೇಶದಂತೆ ಧಾರವಾಡ ಜಿಲ್ಲೆಯಲ್ಲಿ ಕೈಗೊಂಡಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸುವಾಗ ಆಕಸ್ಮಿಕ ಅಪಘಾತಕ್ಕೆ ಒಳಗಾದ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು ಮಾಡುವಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನೀಡಿದ್ದ ನಿರ್ದೇಶನವನ್ನು ಪಾಲಿಸಿ, ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು ಬುದುವಾರದಂದು (ನ.13) ಆದೇಶಿಸಿದ್ದಾರೆ. ಸಮೀಕ್ಷಾ ಕಾರ್ಯಕ್ಕೆ ತೆರಳುವಾಗ ಬೈಕ್ ಅಪಘಾತ ಮತ್ತು…

Read More

ನ. 14 ರಿಂದ 20 ರವರೆಗೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ

​ಧಾರವಾಡ ನ.12: ದೇಶದ ಆರ್ಥಿಕ ಪ್ರಗತಿಗೆ ಪೂರಕವಾಗಿರುವ ಸಹಕಾರ ಕ್ಷೇತ್ರದ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ, 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನವೆಂಬರ್ 14, 2025 ರಿಂದ ನವೆಂಬರ್ 20, 2025 ರವರೆಗೆ ಆಚರಿಸಲಾಗುತ್ತಿದೆ ಎಂದು ಧಾರವಾಡ ಜಿಲ್ಲಾ ಸಹಕಾರಿ ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ​ಪ್ರತಿ ವರ್ಷದಂತೆ ಈ ವರ್ಷವೂ ದೇಶಾದ್ಯಂತ ಆಚರಿಸಲ್ಪಡುತ್ತಿರುವ ಈ ಸಹಕಾರ ಸಪ್ತಾಹದ ಮುಖ್ಯ ಧೈಯವು “ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು” ಎಂಬುದಾಗಿದೆ. ಸಹಕಾರ ಕ್ಷೇತ್ರದ…

Read More