ಕೃಷಿ ವಿಶ್ವವಿದ್ಯಾಲಯದಲ್ಲಿ ದಲಿತ ನೌಕರರಿಗೆ ಕಿರುಕುಳ: ದಲಿತ ಸಂಘರ್ಷ ಸಮಿತಿ ಖಂಡನೆ, ವಜಾಗೆ ಒಂದು ವಾರ ಗಡುವು
ಧಾರವಾಡ: ವಿದ್ಯಾಕಾಶಿ ಎಂದೇ ಪ್ರಸಿದ್ಧವಾದ ಧಾರವಾಡ ಜಿಲ್ಲೆಯ ಪ್ರತಿಷ್ಠಿತ ಕೃಷಿ ವಿಶ್ವವಿದ್ಯಾಲಯದಲ್ಲಿ (ಎಯುಡಿ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಶೋಷಿತ ವರ್ಗದ ನೌಕರರನ್ನು ಗುರಿಯಾಗಿಸಿಕೊಂಡು ನಿರಂತರ ಮಾನಸಿಕ ಹಿಂಸೆ ಮತ್ತು ಕಿರುಕುಳ ನೀಡುತ್ತಿರುವ ಗಂಭೀರ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೃಷಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ರವಿಕುಮಾರ ಮಾಳಿಗೇರ ಅವರ ಗೂಂಡಾವರ್ತನೆ ಮತ್ತು ಹಿಟ್ಲರ್ ಸಂಸ್ಕೃತಿಯನ್ನು ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ) ತೀವ್ರವಾಗಿ ಖಂಡಿಸಿದೆ. ಆರೋಪಿ ರವಿಕುಮಾರ ಮಾಳಿಗೇರ ಅವರು ಶೋಷಿತ ವರ್ಗದ…

