ಧಾರವಾಡದಲ್ಲಿ ಟೆನ್ನಿಸ್ ಜಯಭೇರಿ: ರಾಜ್ಯಮಟ್ಟದ ಪಂದ್ಯಾವಳಿಗೆ 300ಕ್ಕೂ ಹೆಚ್ಚು ಆಟಗಾರರ ಭಾಗಿ; ಕ್ರೀಡಾಂಗಣ ನಿರ್ಮಾಣಕ್ಕೆ ಸಚಿವರ ಭರವಸೆ
ಧಾರವಾಡ ನ. 07: ಧಾರವಾಡದಲ್ಲಿ ಶುಕ್ರವಾರದಂದು ಡಿಡಿಎಲ್‌ಟಿಎ ಆವರಣದ ರಾಜ್ಯಾಧ್ಯಕ್ಷ ಪೆವಲಿನ್‌ನಲ್ಲಿ ನಡೆದ ರಾಜ್ಯಮಟ್ಟದ ಪುರುಷರ ಲಾನ್ ಟೆನ್ನಿಸ್ ಪಂದ್ಯಾವಳಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಬಾರಿ ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಷ್ಠಿತ ಪಂದ್ಯಾವಳಿಯಲ್ಲಿ 300ಕ್ಕೂ ಹೆಚ್ಚು ಕ್ರೀಡಾಪಟುಗಳು ಧಾರವಾಡದಿಂದ ಭಾಗವಹಿಸಿದ್ದು, ಇದು ರಾಜ್ಯದಲ್ಲಿ ಟೆನ್ನಿಸ್ ಕ್ರೀಡೆಯ ಜನಪ್ರಿಯತೆಯನ್ನು ಎತ್ತಿ ಹಿಡಿದಿದೆ ಎಂದು ಹೇಳಿದರು. ಕ್ರೀಡೆಯು ದೈಹಿಕ ಮತ್ತು ಮಾನಸಿಕ…

