ಧಾರವಾಡದಲ್ಲಿ ಜೂ.14ರಂದು 4ನೇ ವಲಯ ಕಾನೂನು ಕಾರ್ಯಾಗಾರ: 6 ಜಿಲ್ಲೆಗಳ 1,200ಕ್ಕೂ ಅಧಿಕ ವಿದ್ಯಾರ್ಥಿಗಳ ಭಾಗವಹಿಸುವಿಕೆಗೆ ಸಜ್ಜು
ಧಾರವಾಡ, ಜೂ.12: ಕಾನೂನು ವಿದ್ಯಾರ್ಥಿಗಳಿಗೆ ನ್ಯಾಯಾಂಗ ವ್ಯವಸ್ಥೆ, ಕಾನೂನು ಸೇವಾ ಪ್ರಾಧಿಕಾರದ ಕಾರ್ಯಚಟುವಟಿಕೆಗಳು ಹಾಗೂ ಕಾನೂನು ಶಿಕ್ಷಣದ ಪ್ರಾಯೋಗಿಕ ಅಂಶಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ “ಫ್ರಾಮ್ ಕ್ಲಾಸ್ ರೂಮ್ ಟು ಕೋರ್ಟ್ ರೂಮ್” ವಿಷಯದಡಿ 4ನೇ ವಲಯ ಕಾರ್ಯಾಗಾರವನ್ನು ಜೂನ್ 14ರಂದು ಧಾರವಾಡದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್.ವಿ. ವಿಜಯ ತಿಳಿಸಿದ್ದಾರೆ. ಗುರುವಾರ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

