ಪ್ರಕೃತಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಹೊಣೆಗಾರರಾಗಬೇಕು’ – ಡಾ. ಜಿನದತ್ತ ಹಡಗಲಿ
ಧಾರವಾಡ:ಪ್ರಕೃತಿಯು ಪ್ರತಿ ಜೀವಿಗೆ ಅಪಾರ ಕೊಡುಗೆ ನೀಡಿದೆ. ಆದರೆ, ಅದರ ಸದುಪಯೋಗ ಮಾಡಿಕೊಳ್ಳದ ಮಾನವ, ಪ್ಲಾಸ್ಟಿಕ್ ಹಾಗೂ ರಾಸಾಯನಿಕ ಗೊಬ್ಬರಗಳಂತಹ ವಸ್ತುಗಳ ಬಳಕೆಯಿಂದ ತನ್ನನ್ನೇ ತಾನು ಅಧೋಗತಿಗೆ ತಳ್ಳಿಕೊಳ್ಳುತ್ತಿದ್ದಾನೆ. ಇದರಿಂದ ಬರಬಾರದ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾನೆ ಎಂದು ನಿವೃತ್ತ ಪ್ರಾಧ್ಯಾಪಕ ಡಾ. ಜಿನದತ್ತ ಹಡಗಲಿ ಅಭಿಪ್ರಾಯಪಟ್ಟರು. ಇಲ್ಲಿಯ ಪರಿಸರ ಭವನದಲ್ಲಿ ಜಿಲ್ಲಾ ಆಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಹಾಗೂ ಹುಬ್ಬಳ್ಳಿ-ಧಾರವಾಡ ನಾಗರಿಕ ಪರಿಸರ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ…

