ವಿದ್ಯಾರ್ಥಿಗಳು ಉತ್ತಮ ಮೌಲ್ಯಗಳೊಂದಿಗೆ ಆದರ್ಶ ಪ್ರಜೆಗಳಾಗಿ ರೂಪುಗೊಳ್ಳಲಿ: ಅಬಕಾರಿ ನಿರೀಕ್ಷಕ ರಾಮು ಆರೇಣ್ಣವರ ಕರೆ
ನವಲಗುಂದ: ವಿದ್ಯಾರ್ಥಿಗಳು ಶಿಸ್ತು, ಸಂಯಮ ಮತ್ತು ಸಂಸ್ಕಾರದಂತಹ ಉತ್ತಮ ಜೀವನ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಜವಾಬ್ದಾರಿಯುತ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ನವಲಗುಂದ ವಲಯದ ಅಬಕಾರಿ ನಿರೀಕ್ಷಕರಾದ ರಾಮು ಆರೇಣ್ಣವರ ಅವರು ತಿಳಿಸಿದರು. ಪಟ್ಟಣದ ಬಸವೇಶ್ವರ ನಗರದಲ್ಲಿರುವ ಮೌಲಾನಾ ಅಜಾದ್ ಮಾದರಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ ಸ್ನೇಹ ಸಮ್ಮೇಳನವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಯುವ ಪೀಳಿಗೆಯು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ, ಉತ್ತಮ ಆರೋಗ್ಯಕ್ಕಾಗಿ ಪೋಷಕಾಂಶಯುಕ್ತ ಆಹಾರ ಸೇವನೆಗೆ ಆದ್ಯತೆ ನೀಡಬೇಕು….

