ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ‘ಜ್ಞಾನ ಸಿಂಚನ’ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜನೆ
ಧಾರವಾಡ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆ ಹಾಗೂ ಪರೀಕ್ಷಾ ಭಯ ಹೋಗಲಾಡಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯು ‘ಜ್ಞಾನ ಸಿಂಚನ’ ಎಂಬ ವಿಶೇಷ ನೇರ ಫೋನ್-ಇನ್ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮವು ಫೆಬ್ರವರಿ 16 ರಿಂದ ಫೆಬ್ರವರಿ 25 ರವರೆಗೆ ವಿವಿಧ ಹಂತಗಳಲ್ಲಿ ನಡೆಯಲಿದ್ದು, ವಿದ್ಯಾರ್ಥಿಗಳು ವಿಷಯ ತಜ್ಞರೊಂದಿಗೆ ನೇರವಾಗಿ ಮಾತನಾಡಿ ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಫೆಬ್ರವರಿ 16, 18, 20, 23 ಮತ್ತು 25…

