ಸಾಲ ಬಾದೆ ತಾಳಲಾರದೆ ರೈತ ಆತ್ಮಹತ್ಯೆ

ಕುಂದಗೋಳ: ಸಾಲ ಬಾಧೆ ಹಾಗೂ ಬೆಳೆ ನಷ್ಟದಿಂದ ಮನನೊಂದ ರೈತರೊಬ್ಬರು ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಕೇಡಿಸುವ ಘಟನೆ ತಾಲೂಕಿನ ಹಿರೇಹರಕುಣಿ ಗ್ರಾಮದಲ್ಲಿ ನಡೆದಿದೆ. ಹಿರೇಹರಕುಣಿ ಗ್ರಾಮದ ನಿವಾಸಿಯಾದ ಶಿವಾನಂದ ವಿರುಪಾಕ್ಷಪ್ಪ ಹೂಗಾರ (64) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ರೈತರಾಗಿದ್ದಾರೆ. ಮೃತ ಶಿವಾನಂದ ಅವರು ತಮ್ಮ ಜಮೀನು ಸಾಗುವಳಿಗಾಗಿ ಹಿರೇಹರಕುಣಿಯ ಕೆ.ವಿ.ಜಿ. ಬ್ಯಾಂಕ್‌ನಲ್ಲಿ 02 ಲಕ್ಷ ರೂಪಾಯಿಗಳ ಬೆಳೆ ಸಾಲವನ್ನು ಮಾಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಜಮೀನಿನಲ್ಲಿ ಸರಿಯಾಗಿ ಬೆಳೆ ಬಾರದೆ, ಇತ್ತ ಬಂದ ಬೆಳೆಗೆ…

Read More

ಮಹಿಳಾ ಪೊಲೀಸ್ ಠಾಣೆಗಳು ಮಹಿಳೆಯರಿಗೆ ಆತ್ಮವಿಶ್ವಾಸ ತುಂಬುವ ಕೇಂದ್ರಗಳಾಗಲಿ: ಡಾ. ನಾಗಲಕ್ಷ್ಮಿ ಚೌದರಿ

ಧಾರವಾಡ: ಮಹಿಳೆಯರ ಮೇಲಿನ ದೌರ್ಜನ್ಯ, ಕಿರುಕುಳ ಹಾಗೂ ಸೈಬರ್ ಅಪರಾಧ ಪ್ರಕರಣಗಳಿಗೆ ತ್ವರಿತ ಸ್ಪಂದನೆ ನೀಡುವುದು ಪೊಲೀಸ್ ಇಲಾಖೆಯ ಮೊದಲ ಆದ್ಯತೆಯಾಗಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಹೇಳಿದರು. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ಸಮೀಪದ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿ, ಮೂಲಸೌಕರ್ಯಗಳು ಹಾಗೂ ಮಹಿಳೆಯರಿಗೆ ನೀಡಲಾಗುತ್ತಿರುವ ಸೇವೆಗಳ ಕುರಿತು ಪರಿಶೀಲನೆ ನಡೆಸಿದ ಅವರು, ಮಹಿಳೆಯರು ಯಾವುದೇ ರೀತಿಯ ಅನ್ಯಾಯ, ಶೋಷಣೆ ಅಥವಾ ಕಿರುಕುಳಕ್ಕೆ ಒಳಗಾದಾಗ…

Read More

ಮಹಿಳೆಯರ ಬದುಕಿಗೆ ಆಶಾಕಿರಣವಾಗಲಿ ಸರ್ಕಾರಿ ಇಲಾಖೆಗಳು: ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ

ಧಾರವಾಡ: ಮಹಿಳೆಯರ ಅಭಿವೃದ್ಧಿ ಮತ್ತು ಸುರಕ್ಷತೆಗಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ಎಲ್ಲಾ ಇಲಾಖೆಗಳು ಸಮನ್ವಯದಿಂದ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಅಧಿಕಾರಿಗಳು ಮಾತೃ ಹೃದಯದಿಂದ ಕರ್ತವ್ಯ ನಿರ್ವಹಿಸಿದಾಗ ಮಾತ್ರ ನೊಂದ ಮಹಿಳೆಯರಿಗೆ ನ್ಯಾಯ ಸಿಗಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಮಹಿಳಾ ಸ್ಪಂದನ ಹಾಗೂ ಮಹಿಳಾ ಮತ್ತು ಮಕ್ಕಳ…

Read More

ಐದು ವರ್ಷದೊಳಗಿನ 2.07 ಲಕ್ಷ ಮಕ್ಕಳಿಗೆ ಲಸಿಕೆ ಗುರಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್

ಧಾರವಾಡ, ಮೇ 19: ಜಿಲ್ಲೆಯಾದ್ಯಂತ ಬರುವ ಜೂನ್ 28ರಿಂದ ಜುಲೈ 1ರವರೆಗೆ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ಜಾರಿಗೊಳಿಸಲು ಸಮಗ್ರ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶೂನ್ಯದಿಂದ ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಹನಿಯಿಂದ ವಂಚಿತವಾಗದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸಮರ್ಪಕ ಕಾರ್ಯಯೋಜನೆ ರೂಪಿಸಬೇಕು…

Read More

ಗುಡಗೇರಿಯಲ್ಲಿ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಬಲಿಯಾದ ಬಾಲಕ: 108 ಅಂಬುಲೆನ್ಸ್‌ ವಿರುದ್ಧ ಸಾರ್ವಜನಿಕರ ಆಕ್ರೋಶ

ಗುಡಗೇರಿಯಲ್ಲಿ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಬಲಿಯಾದ ಬಾಲಕ: 108 ಅಂಬುಲೆನ್ಸ್‌ ವಿರುದ್ಧ ಸಾರ್ವಜನಿಕರ ಆಕ್ರೋಶ ಕುಂದಗೋಳ: ತಾಲ್ಲೂಕಿನ ಗುಡಗೇರಿ: ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಹಾಗೂ ತುರ್ತು ಸೇವೆ ಒದಗಿಸಬೇಕಾದ 108 ಅಂಬುಲೆನ್ಸ್‌ನ ಬೇಜವಾಬ್ದಾರಿತನದಿಂದಾಗಿ ವಿದ್ಯುತ್ ಆಘಾತಕ್ಕೊಳಗಾಗಿದ್ದ 12 ವರ್ಷದ ಬಾಲಕನೊಬ್ಬ ದಾರಿಮಧ್ಯೆಯೇ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ನಡೆದಿದೆ. ಗ್ರಾಮದ ಅಂಬೇಡ್ಕರ್ ನಗರದ ನಿವಾಸಿ ಕಾರ್ತಿಕ್ ಮಾಂತೇಶ ಪೂಜಾರ (12) ಮೃತಪಟ್ಟ ದುರ್ದೈವಿ ಬಾಲಕನಾಗಿದ್ದಾನೆ. ಶನಿವಾರ ಕಾರ್ತಿಕ್‌ಗೆ ಆಕಸ್ಮಿಕವಾಗಿ ವಿದ್ಯುತ್ ತಗುಲಿದ್ದು, ತಕ್ಷಣವೇ…

Read More

ಖಾತೆ ಬದಲಾವಣೆಗೆ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಶಿರಸ್ತೆದಾರ್ ಸುರೇಶ್ ಅರಕೇರಿ; ತಡರಾತ್ರಿಯವರೆಗೆ ಕಡತಗಳ ಪರಿಶೀಲನೆ

ಕುಂದಗೋಳ: ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿರಸ್ತೆದಾರ್ ಸುರೇಶ್ ಅರಕೇರಿ ಎಂಬುವವರು ಖಾತೆ ಬದಲಾವಣೆಗಾಗಿ ಸಾರ್ವಜನಿಕರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿರುವುದು ಇಡೀ ಕಂದಾಯ ಇಲಾಖೆಯೇ ತಲೆತಗ್ಗಿಸುವಂತಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾವ್ ತಾಲೂಕಿನ ದುಂಡಸಿ ಗ್ರಾಮದ ನಿವಾಸಿಯಾದ ಹಜರತ್ ಅಲಿ ತಂದೆ ಇಮಾಮ್ ಸಾಬ್ ಅರಳಿಕಟ್ಟಿ ಎಂಬುವವರಿಂದ ಖಾತೆ ಬದಲಾವಣೆ ಮಾಡಿಕೊಡಲು ಸುರೇಶ್ ಅರಕೇರಿ ಅವರು ಭೂಮಿ ವಿಭಾಗದಲ್ಲಿ 2,000 ರೂಪಾಯಿಗಳ ಲಂಚದ ಹಣವನ್ನು ಪಡೆದಿದ್ದಾರೆ.ಮೊದಲಿಗೆ ಗ್ರಾಮ ಲೆಕ್ಕಾಧಿಕಾರಿಯಾಗಿ ಸೇವೆ ಆರಂಭಿಸಿ, ನಂತರ ಕಂದಾಯ ನಿರೀಕ್ಷಕರಾಗಿ,…

Read More

ಕುಂದಗೋಳದಲ್ಲಿ ಲೋಕಾಯುಕ್ತ ದಿಢೀರ್ ಭೇಟಿ: ದಾಖಲೆಗಳ ಪರಿಶೀಲನೆ, ಸಿಬ್ಬಂದಿ ತಲ್ಲಣ ಕುಂದಗೋಳ: ಇಲ್ಲಿನ ತಹಶೀಲ್ದಾರ್ ಕಚೇರಿಯ ವಿವಿಧ ಇಲಾಖೆಗಳ ಮೇಲೆ ಧಾರವಾಡದ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ಈ ಹಠಾತ್ ಭೇಟಿಯಿಂದ ಕಚೇರಿಯ ಸಿಬ್ಬಂದಿ ತಲ್ಲಣಗೊಂಡಿದ್ದು, ದಾಳಿಯ ವೇಳೆ ಅಧಿಕಾರಿಗಳು ಕಚೇರಿಯ ಪ್ರಮುಖ ದಾಖಲಾತಿಗಳನ್ನು ಹಾಗೂ ವಿವಿಧ ವಿಭಾಗಗಳ ಅಧಿಕಾರಿಗಳ ಕೆಲಸದ ವೈಖರಿಯನ್ನು ತೀವ್ರ ಪರಿಶೀಲನೆಗೆ ಒಳಪಡಿಸಿದ್ದಾರೆ. ಸಾರ್ವಜನಿಕರ ದೂರುಗಳು ಹಾಗೂ ಕಚೇರಿಯಲ್ಲಿ ನಡೆಯುತ್ತಿದ್ದ ಆಡಳಿತಾತ್ಮಕ ವ್ಯವಹಾರಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ…

Read More

ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಅಗತ್ಯ: ಡಾ. ಸುರೇಶ್ ಕಮ್ಮಾರ

ಧಾರವಾಡ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಕೇವಲ ಪಠ್ಯಕ್ಕೆ ಸೀಮಿತವಾಗದೆ, ಅವರಲ್ಲಿರುವ ಪ್ರತಿಭೆ ಹೊರಹಾಕಲು ಪಠ್ಯೇತರ ಚಟುವಟಿಕೆಗಳು ಅತ್ಯಗತ್ಯ. ಪಾಲಕರು ಮಕ್ಕಳಿಗೆ ನೃತ್ಯ, ಸಂಗೀತ, ಕರಾಟೆಯಂತಹ ಕಲೆಗಳಲ್ಲಿ ಭಾಗವಹಿಸಲು ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಭಾರತದ ಮಾನವ ಹಕ್ಕುಗಳ ಸಮಿತಿ ಸದಸ್ಯ ಹಾಗೂ ಜಿಲ್ಲಾ ಸಂಪನ್ಮೂಲ ಅಧಿಕಾರಿ ಡಾ. ಸುರೇಶ್ ಕಮ್ಮಾರ ಹೇಳಿದರು. ​ನಗರದ ಯುವ ಡಾನ್ಸ್ ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ ‘ಯುವ ಉತ್ಸವ-೨೦೨೬’ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವ ಡಾನ್ಸ್…

Read More

ಬೇಸಿಗೆ ಶಿಬಿರಗಳು ಮಕ್ಕಳಲ್ಲಿಯ ಸೃಜನಶೀಲತೆ ಹೆಚ್ಚಿಸುತ್ತವೆ: ಪ್ರೊ. ಲಲಿತಾ ನಾಯಕ ಅಭಿಮತ

ಧಾರವಾಡ: ಇಂದಿನ ಮಕ್ಕಳಲ್ಲಿ ಮೊಬೈಲ್ ವ್ಯಸನ ಹೆಚ್ಚಾಗಿರುವ ಆತಂಕಕಾರಿ ಸಂದರ್ಭದಲ್ಲಿ, ಬೇಸಿಗೆ ಶಿಬಿರಗಳು ಮಕ್ಕಳನ್ನು ಮೊಬೈಲ್‌ನಿಂದ ದೂರವಿಟ್ಟು ಅವರಲ್ಲಿ ಸುಪ್ತವಾಗಿರುವ ಸೃಜನಶೀಲತೆಯನ್ನು ಹೊರತರಲು ಸಹಕಾರಿಯಾಗಿವೆ ಎಂದು ಚಿತ್ರದುರ್ಗದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ಪ್ರಾಧ್ಯಾಪಕಿ ಪ್ರೊ. ಲಲಿತಾ ನಾಯಕ ಅವರು ಅಭಿಪ್ರಾಯಪಟ್ಟರು. ​ನಗರದ ಲೇಕ್ ಸಿಟಿಯ ಸಾಂಸ್ಕೃತಿಕ ಭವನದಲ್ಲಿ ‘ರೈಜಿಂಗ್ ಸ್ಟಾರ್ಸ್ ಆರ್ಟ್ ಮತ್ತು ಕಲ್ಚರಲ್ ಅಕಾಡೆಮಿ’ ಹಾಗೂ ‘ಕನ್ನಡ ಮತ್ತು ಸಂಸ್ಕೃತಿ ಇಲಾಖೆ’ಯ ಸಹಯೋಗದಲ್ಲಿ ಆಯೋಜಿಸಿದ್ದ ‘ಮಕ್ಕಳ ಸಾಂಸ್ಕೃತಿಕ ಸಂಭ್ರಮ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು…

Read More

ಗುಡಿಸಾಗರ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಸಡಗರ: ಸಾಮೂಹಿಕ ವಿವಾಹಕ್ಕೆ ಸಾಕ್ಷಿಯಾದ ಭಕ್ತಸಾಗರ

ನವಲಗುಂದ: ತಾಲ್ಲೂಕಿನ ಗುಡಿಸಾಗರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವವು ಅತ್ಯಂತ ವೈಭವದಿಂದ ಜರುಗಿತು. ಭಕ್ತಿ ಮತ್ತು ಸೌಹಾರ್ದತೆಯ ಸಂಗಮದಂತಿದ್ದ ಈ ಜಾತ್ರಾ ಮಹೋತ್ಸವಕ್ಕೆ ನರಗುಂದ ಪತ್ರಿವನದ ಪೂಜ್ಯ ಅಜ್ಜರು ಆಗಮಿಸಿ, ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾದ ಸಾಮೂಹಿಕ ವಿವಾಹಕ್ಕೆ ಚಾಲನೆ ನೀಡಿದರು. ಮಂತ್ರಘೋಷಗಳ ನಡುವೆ ನೂತನ ವಧು-ವರರಿಗೆ ಅಕ್ಷತೆ ಹಾಕಿ ಹರಸಿದ ಪೂಜ್ಯರು, ದಾಂಪತ್ಯ ಜೀವನಕ್ಕೆ ಶುಭ ಹಾರೈಸಿದರು. ​ಜಾತ್ರೆಯ ಅಂಗವಾಗಿ ವಿವಿಧ ಊರುಗಳಿಂದ ಆಗಮಿಸಿದ್ದ ಶ್ರೀ ಬೀರಲಿಂಗೇಶ್ವರನ ಪಲ್ಲಕ್ಕಿಗಳು ಗ್ರಾಮದ…

Read More