ಉತ್ತರ ಕರ್ನಾಟಕದ ಕಲಾವಿದರಿಗೆ ಸನ್ಮಾನ: ರಂಗಭೂಮಿ ಪ್ರತಿಭೆಗಳಿಗೆ ಪ್ರೋತ್ಸಾಹ ಅಗತ್ಯ – ಹಿರಿಯೂರು ರಾಘವೇಂದ್ರ
ಹುಬ್ಬಳ್ಳಿ: ಉತ್ತರ ಕರ್ನಾಟಕವು ರಂಗಭೂಮಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ನೂರಾರು ಕಲಾವಿದರ ಬದುಕಿಗೆ ಆಸರೆಯಾಗಿ ನಿಂತಿದೆ ಎಂದು ಖ್ಯಾತ ಚಿತ್ರ ನಿರ್ದೇಶಕ ಹಾಗೂ ಸಾಹಿತಿ ಹಿರಿಯೂರು ರಾಘವೇಂದ್ರ ಅಭಿಪ್ರಾಯಪಟ್ಟರು. ನಗರದ ಭವಾನಿ ನಗರದಲ್ಲಿ ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನದ ವತಿಯಿಂದ ಹಿರಿಯ ರಂಗಕರ್ಮಿ, ಸಿನಿಮಾ ಹಾಗೂ ಧಾರವಾಹಿ ನಟಿ ಮಾಲತೇಶ್ರೀ ಮೈಸೂರು ಅವರಿಗೆ ಏರ್ಪಡಿಸಲಾಗಿದ್ದ ಗೌರವ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಸಿನಿಮಾ ಮತ್ತು ಧಾರವಾಹಿಗಳ ಮೂಲಕ ಮನೆಮಾತಾಗಿರುವ ಮಾಲತೇಶ್ರೀ…

