ಹುಬ್ಬಳ್ಳಿ: ಉಣಕಲ್ ಬಳಿ ಭೀಕರ ಅಪಘಾತ; ಬಿಆರ್‌ಟಿಎಸ್ ರಸ್ತೆಯಲ್ಲಿ ಚಿಗರಿ ಬಸ್-ಕಾರು ಮುಖಾಮುಖಿ ಡಿಕ್ಕಿ
ಹುಬ್ಬಳ್ಳಿ: ನಗರದ ಉಣಕಲ್ ಬಳಿಯ ಬಿಆರ್‌ಟಿಎಸ್ (BRTS) ಕಾರಿಡಾರ್‌ನಲ್ಲಿ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಯಿಂದ ಧಾರವಾಡದ ಕಡೆಗೆ ತೆರಳುತ್ತಿದ್ದ ‘ಚಿಗರಿ’ ಬಸ್ ಹಾಗೂ ಎದುರುಗಡೆಯಿಂದ ಬರುತ್ತಿದ್ದ ನೆಕ್ಸಾನ್ ಕಾರಿನ ನಡುವೆ ಸಂಭವಿಸಿದ ಈ ಮುಖಾಮುಖಿ ಡಿಕ್ಕಿಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾನುವಾರ ಬೆಳಿಗ್ಗೆ ಈ ಅವಘಡ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕಾರು ಹಾಗೂ ಬಸ್ಸಿನ ಮುಂಭಾಗ ಜಖಂಗೊಂಡಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳಿಗೆ…

