ಸಿಎಂ ಕುರ್ಚಿ ಕಾಳಗ’ದಿಂದ ಆಡಳಿತಕ್ಕೆ ಹಾನಿ: “ಕಾಂಗ್ರೆಸ್ ಆಡಳಿತ ಅಸಹಾಯಕ”- ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕೆ
: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಜ್ಯದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಹುದ್ದೆಯ ವಿವಾದವನ್ನು ಪರಿಹರಿಸಲು ಕಾಂಗ್ರೆಸ್ ಹೈಕಮಾಂಡ್ “ಅಸಹಾಯಕವಾಗಿದೆ” ಎಂದು ತೀವ್ರವಾಗಿ ಟೀಕಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ಹುಬ್ಬಳ್ಳಿಯ ಬೆಂಗೇರಿಯಲ್ಲಿರುವ ಶ್ರೀ ಹನುಮಂತ ದೇವಸ್ಥಾನದಲ್ಲಿ ನೇರಪ್ರಸಾರ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಆಡಳಿತ ವೈಫಲ್ಯದ ಬಗ್ಗೆ ವಾಗ್ದಾಳಿ ನಡೆಸಿದರು. ಆಡಳಿತ ಮತ್ತು ಭ್ರಷ್ಟಾಚಾರದ ಕುರಿತು ಟೀಕೆ: ಮುಖ್ಯಮಂತ್ರಿ ಕುರ್ಚಿಗಾಗಿ ನಡೆದ ಹೋರಾಟವು ರಾಜ್ಯದ ಆಡಳಿತಕ್ಕೆ ಹಾನಿ ಮಾಡುತ್ತಿದ್ದು,…

