ಐಪಿಎಲ್ 2026 ಆರಂಭ: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರ್‍ಸಿಬಿಗೆ 6 ವಿಕೆಟ್‍ಗಳ ಭರ್ಜರಿ ಜಯ
ಬೆಂಗಳೂರು: ಹತ್ತೊಂಬತ್ತನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಇಂದಿನಿಂದ ಅದ್ಧೂರಿಯಾಗಿ ಆರಂಭಗೊಂಡಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಸನ್ ರೈಸರ್ಸ್ ಹೈದರಾಬಾದ್ (SRH) ವಿರುದ್ಧ 6 ವಿಕೆಟ್‍ಗಳ ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡವು ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 201 ರನ್‍ಗಳ…

