ಮುಂಡಗೋಡ ಮೀಟರ್ ಬಡ್ಡಿ ಕಿಂಗ್ಪಿನ್ ಹತ್ಯೆ ರಹಸ್ಯ ಬಯಲು: ಐವರು ಸುಪಾರಿ ಹಂತಕರ ಬಂಧನ, ಪಿಸ್ತೂಲ್ ವಶ
ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಸಂಚಲನ ಮೂಡಿಸಿದ್ದ ಮೀಟರ್ ಬಡ್ಡಿ ದಂಧೆಯ ಕಿಂಗ್ಪಿನ್ ಜಮೀರ್ ಅಹ್ಮದ್ ದರ್ಗಾವಾಲೆ ಕೊಲೆ ಪ್ರಕರಣದ ಸುರುಳಿ ಬಿಚ್ಚಿಕೊಂಡಿದೆ. ಬಡ್ಡಿ ದಂಧೆಯ ವೃತ್ತಿ ವೈಷಮ್ಯಕ್ಕಾಗಿ ಸುಪಾರಿ ನೀಡಿ ಈ ಹತ್ಯೆ ಮಾಡಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬೆಂಗಳೂರಿನ ನೆಲಮಂಗಲದ ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ ಮುಂಡಗೋಡಿನ ನಿವಾಸಿ ಮಂಜುನಾಥ ಕಾಜಗಾರ ಅಲಿಯಾಸ್ ಮಂಜ್ಯಾ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಮಂಜುನಾಥ ಹಾಗೂ ಮೃತ ಜಮೀರ್…

