ಕಾರ್ಕಳ: ಸುಮೇಧಾ ಫ್ಯಾಷನ್ ಇನ್‌ಸ್ಟಿಟ್ಯೂಟ್‌ನಿಂದ ಉಚಿತ ಫ್ಯಾಷನ್ ಡಿಸೈನಿಂಗ್ ಕಾರ್ಯಾಗಾರ

ಕಾರ್ಕಳ: ಸ್ಥಳೀಯ ಎಸ್.ಜೆ. ಆರ್ಕೇಡ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮೇಧಾ ಫ್ಯಾಷನ್ ಇನ್‌ಸ್ಟಿಟ್ಯೂಟ್ ವತಿಯಿಂದ ಆಸಕ್ತ ಅಭ್ಯರ್ಥಿಗಳಿಗಾಗಿ ಉಚಿತ ಫ್ಯಾಷನ್ ಡಿಸೈನಿಂಗ್ ವರ್ಕ್‌ಶಾಪ್ ಆಯೋಜಿಸಲಾಗಿದೆ. ಫ್ಯಾಷನ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ವೇದಿಕೆಯಾಗಿದ್ದು, ಮಾರ್ಚ್ 25 ರಿಂದ ಮಾರ್ಚ್ 30ರ ವರೆಗೆ ಈ ತರಬೇತಿ ಶಿಬಿರ ನಡೆಯಲಿದೆ. ​ಈ ವಿಶೇಷ ಕಾರ್ಯಾಗಾರದಲ್ಲಿ ಫ್ಯಾಷನ್ ಕ್ಷೇತ್ರದ ಪ್ರಾಥಮಿಕ ಮಾಹಿತಿಯೊಂದಿಗೆ ಹೂಪ್ ಆರ್ಟ್, ಜ್ಯುವೆಲ್ಲರಿ ಮೇಕಿಂಗ್ ಹಾಗೂ ಮೆಹೆಂದಿ ಕಲೆಯ ಬಗ್ಗೆ ಪ್ರಾಯೋಗಿಕ ತರಬೇತಿಯನ್ನು ನೀಡಲಾಗುತ್ತದೆ. ವಿಶೇಷವಾಗಿ…

Read More

‘ಭಾರತ ಭಾಗ್ಯ ವಿಧಾತ’ ಬಿರುದಾಂಕಿತ ಪ್ರಧಾನಿ ಮೋದಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ‘ನವ ಸಂಕಲ್ಪ’ ಪಾಲನೆಗೆ ಕರೆ

ಉಡುಪಿ: ನ 28: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರದಂದು (ನವೆಂಬರ್ 28,) ಕೃಷ್ಣನೂರು ಉಡುಪಿಗೆ ಐತಿಹಾಸಿಕ ಭೇಟಿ ನೀಡಿದರು. ಪ್ರಧಾನಿಯವರ ಈ ಭೇಟಿಯು ‘ಲಕ್ಷ ಕಂಠ ಗೀತಾ ಪಾರಾಯಣ’ ಕಾರ್ಯಕ್ರಮದ ಮುಖ್ಯ ಭಾಗವಾಗಿತ್ತು. ಪ್ರಧಾನಿಯವರ ಆಗಮನದ ಹಿನ್ನೆಲೆಯಲ್ಲಿ ಉಡುಪಿ ನಗರದಲ್ಲಿ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿತ್ತು ಹಾಗೂ ಅದ್ಧೂರಿ ರೋಡ್ ಶೋ ಮತ್ತು ಮಹತ್ವದ ಆಧ್ಯಾತ್ಮಿಕ ಸಮಾರಂಭಗಳು ಜರುಗಿದವು. ​ಮಂಗಳೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಉಡುಪಿ ತಲುಪಿದ ಪ್ರಧಾನಿಯವರು, ಬನ್ನಂಜೆ ವೃತ್ತದಿಂದ ಕಾಳಸಂಕ ವೃತ್ತದವರೆಗೆ…

Read More

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಉಡುಪಿ ಭೇಟಿ: ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ನವೆಂಬರ್ 28) ಉಡುಪಿಗೆ ಭೇಟಿ ನೀಡಲಿದ್ದು, ‘ಲಕ್ಷ ಕಂಠ ಗೀತ ಪಾರಾಯಣ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿಯವರ ಭೇಟಿ ಹಾಗೂ ಬೃಹತ್ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ನಗರ ಮತ್ತು ಸುತ್ತಮುತ್ತಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ​ಪ್ರಧಾನಿ ಮೋದಿ ಅವರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಬೃಹತ್ ರೋಡ್ ಶೋ ಸಹ…

Read More

ಪ್ರಧಾನಿ ನರೇಂದ್ರ ಮೋದಿ ನ. 28ರಂದು ಉಡುಪಿ ಶ್ರೀ ಕೃಷ್ಣಮಠಕ್ಕೆ ಆಗಮನ: ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗಿ

ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿ ಕಾರ್ಯಾಲಯದಿಂದ ಅಧಿಕೃತ ವೇಳಾಪಟ್ಟಿ ಪ್ರಕಟ ​ಉಡುಪಿ: ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ನವೆಂಬರ್ 28 ರಂದು ಆಯೋಜಿಸಲಾಗಿರುವ ಲಕ್ಷಕಂಠ ಗೀತಾ ಪಾರಾಯಣ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾಗವಹಿಸುವುದು ಅಧಿಕೃತವಾಗಿ ಖಚಿತಗೊಂಡಿದೆ. ಶನಿವಾರ ಪ್ರಧಾನ ಮಂತ್ರಿ ಕಾರ್ಯಾಲಯವು (PMO) ಈ ಸಂಬಂಧ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಧಾನ ಮಂತ್ರಿ ಕಾರ್ಯಾಲಯದಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದ್ದು, ಹೆಲಿಪ್ಯಾಡ್ ಸೇರಿದಂತೆ ಕಾರ್ಯಕ್ರಮಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲು…

Read More