ಬಜೆಟ್ನಲ್ಲಿ ಹನೂರು ಕ್ಷೇತ್ರದ ರೈತರಿಗೆ ಸಿಹಿ ಸುದ್ದಿ ನಿರೀಕ್ಷೆ: ಮಾಜಿ ಶಾಸಕ ಆರ್. ನರೇಂದ್ರ ವಿಶ್ವಾಸ
ಹನೂರು: ಮುಂಬರುವ ರಾಜ್ಯ ಬಜೆಟ್ನಲ್ಲಿ ಹನೂರು ಕ್ಷೇತ್ರದ ರೈತಾಪಿ ವರ್ಗ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರವು ಮಹತ್ವದ ಕೊಡುಗೆಗಳನ್ನು ನೀಡಲಿದ್ದು, ಕ್ಷೇತ್ರದಲ್ಲಿ ಅಭಿವೃದ್ಧಿಯ ಹೊಸ ಪರ್ವ ಆರಂಭವಾಗಲಿದೆ ಎಂದು ಮಾಜಿ ಶಾಸಕ ಆರ್. ನರೇಂದ್ರ ತಿಳಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜ್ವಲಂತ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವಲ್ಲಿ ತಾವು ಯಶಸ್ವಿಯಾಗಿದ್ದು, ಈ ಬಾರಿಯ ಆಯವ್ಯಯದಲ್ಲಿ ಪೂರಕ ಸ್ಪಂದನೆ ಸಿಗುವ ನಿರೀಕ್ಷೆಯಿದೆ ಎಂದರು. ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು…

