ಚಳ್ಳಕೆರೆ ಬಳಿ ಭೀಕರ ರಸ್ತೆ ಅಪಘಾತ: ಮೂವರು ಆರ್ಎಸ್ಐ ಸಾವು; ಸ್ಥಳಕ್ಕೆ ಗೃಹ ಸಚಿವ ಪರಮೇಶ್ವರ ಭೇಟಿ
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್ಪೆಕ್ಟರ್ಗಳು (RSI) ಸಾವನ್ನಪ್ಪಿರುವ ಘಟನೆ ತೀವ್ರ ವಿಷಾದ ಮೂಡಿಸಿದೆ. ಘಟನಾ ಸ್ಥಳಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ (CAR) ರಿಸರ್ವ್ ಸಬ್ ಇನ್ಸ್ಪೆಕ್ಟರ್ಗಳಾದ ಮಂಜುನಾಥ್ ದಾರಿಮನಿ, ಅಮರೀಶ್ ಬರ್ಗಿ ಹಾಗೂ ಸಚೀನ್ ಮೃತಪಟ್ಟ ದುರ್ದೈವಿಗಳು….

