ಸೂರಗೊಂಡನಕೊಪ್ಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಬರುತ್ತಿದಂತೆ ಕಪ್ಪುಬಟ್ಟೆ ಪ್ರದರ್ಶನ: ಒಳಮೀಸಲಾತಿ ವಿರುದ್ಧ ಬಂಜಾರ ಸಮುದಾಯದ ಆಕ್ರೋಶ
ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದ ಪವಿತ್ರ ಕ್ಷೇತ್ರ ಭಾಯಾಗಡ್ದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂತ ಸೇವಾಲಾಲ್ ಅವರ 287ನೇ ಜಯಂತ್ಯುತ್ಸವದ ವೇದಿಕೆಯು ರಾಜ್ಯ ಸರ್ಕಾರದ ವಿರುದ್ಧದ ಪ್ರತಿಭಟನಾ ಅಖಾಡವಾಗಿ ಮಾರ್ಪಟ್ಟಿತು. ಸಮಾರಂಭಕ್ಕೆ ಆಗಮಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಂಜಾರ ಸಮುದಾಯದ ಯುವಕರು ಕಪ್ಪು ಬಟ್ಟೆ ಪ್ರದರ್ಶಿಸುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರಕ್ಕೆ ಭಾರಿ ಮುಜುಗರ ಉಂಟುಮಾಡಿದೆ. ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಒಳಮೀಸಲಾತಿ ನೀತಿಯಿಂದ ಬಂಜಾರ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ಡಿಸಿಎಂ ವೇದಿಕೆಗೆ…

