ದಾವಣಗೆರೆ ಉಪಚುನಾವಣೆ: ಸಚಿವ ಜಮೀರ್ ಹೆಸರಿನ ಆಡಿಯೋ ವೈರಲ್; ಷಡ್ಯಂತ್ರ ಎಂದ ಸಿರಾಜ್
ದಾವಣಗೆರೆ: ಇಲ್ಲಿನ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಉಚ್ಚಾಟಿತ ಉಪಾಧ್ಯಕ್ಷ ಮೊಹಮ್ಮದ್ ಸಿರಾಜ್ ನಡುವೆ ನಡೆದಿದೆ ಎನ್ನಲಾದ ಆಡಿಯೋ ಸಂಭಾಷಣೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಉಪಚುನಾವಣೆಯ ಮತದಾನದ ದಿನವಾದ ಏಪ್ರಿಲ್ 9ರಂದು ಇಬ್ಬರ ನಡುವೆ ನಡೆದಿದೆ ಎನ್ನಲಾದ ಸುಮಾರು 3 ನಿಮಿಷ 50 ಸೆಕೆಂಡ್ಗಳ ಈ ಮಾತುಕತೆಯನ್ನು ‘ಕನ್ನಡ ಕಾಕ್ರೋಚ್’ ಎಂಬ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಸೋಮವಾರ ಮುಂಜಾನೆ…

