ಗಣಿತ ಪರೀಕ್ಷೆ ಬರೆಯುತ್ತಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ
ಧಾರ್ (ಮಧ್ಯಪ್ರದೇಶ): ಇಲ್ಲಿನ ಜಿಲ್ಲೆಯ ಪರೀಕ್ಷಾ ಕೇಂದ್ರವೊಂದರಲ್ಲಿ ಹತ್ತನೇ ತರಗತಿ ಬೋರ್ಡ್ ಪರೀಕ್ಷೆ ನಡೆಯುತ್ತಿದ್ದ ವೇಳೆ ಅನಿರೀಕ್ಷಿತ ಘಟನೆಯೊಂದು ಸಂಭವಿಸಿದ್ದು, ಗಣಿತ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಶೌಚಾಲಯದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಫೆಬ್ರವರಿ 26ರಂದು ನಡೆದ ಈ ಘಟನೆಯು ಶೈಕ್ಷಣಿಕ ವಲಯ ಹಾಗೂ ಸಾರ್ವಜನಿಕರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪರೀಕ್ಷಾ ಕೊಠಡಿಯಲ್ಲಿ ಗಣಿತದ ಪ್ರಶ್ನೆಪತ್ರಿಕೆ ಬಿಡಿಸುತ್ತಿದ್ದ ವಿದ್ಯಾರ್ಥಿನಿಗೆ ದಿಢೀರ್ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ನೋವಿನಿಂದ ಅಸ್ವಸ್ಥಳಾದ ಆಕೆ ಕೂಡಲೇ ಪರೀಕ್ಷಾ ಮೇಲ್ವಿಚಾರಕರಿಂದ ಅನುಮತಿ ಪಡೆದು ಶೌಚಾಲಯಕ್ಕೆ…

