ಕೃಷಿ ಮಹಾವಿದ್ಯಾಲಯದಲ್ಲಿ ತಾತ್ಕಾಲಿಕ ಉದ್ಯೋಗ: ಅಕ್ಟೋಬರ್ 9 ರಂದು ಸಂದರ್ಶನ

Spread the love

ಧಾರವಾಡ: ಕೃಷಿ ಪದವಿ ಪಡೆದವರಿಗೆ ಇಲ್ಲಿದೆ ಸುವರ್ಣಾವಕಾಶ. ಧಾರವಾಡದ ಕೃಷಿ ಮಹಾವಿದ್ಯಾಲಯದ ಕೃಷಿ ಕೀಟಶಾಸ್ತ್ರ ವಿಭಾಗದಲ್ಲಿ ಖಾಲಿ ಇರುವ ವಿವಿಧ ತಾತ್ಕಾಲಿಕ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಪದವಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗಳಿಗಾಗಿ ಅಕ್ಟೋಬರ್ 09, 2025 ರಂದು ಬೆಳಿಗ್ಗೆ 11 ಗಂಟೆಗೆ ಸಂದರ್ಶನ ಏರ್ಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಂದು ಡೀನ್ (ಕೃಷಿ) ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.

ಆಸಕ್ತರು ತಮ್ಮ ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ನಿಗದಿತ ದಿನದಂದು ಸಂದರ್ಶನಕ್ಕೆ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ. ಹುದ್ದೆಗಳ ವಿವರ, ಅರ್ಹತೆಗಳು ಮತ್ತು ಅರ್ಜಿ ನಮೂನೆ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕೃಷಿ ವಿಶ್ವವಿದ್ಯಾಲಯದ (ಕೃ.ವಿ.ವಿ.) ಅಧಿಕೃತ ಜಾಲತಾಣವಾದ www.Uasd.edu ಗೆ ಭೇಟಿ ನೀಡಬಹುದು.

Leave a Reply

Your email address will not be published. Required fields are marked *