ಅಣ್ಣಿಗೇರಿ: ಹುಬ್ಬಳ್ಳಿ–ಗದಗ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಹಿಟ್ ಅಂಡ್ ರನ್ ಅಪಘಾತ ಸಂಭವಿಸಿದ್ದು, ರಸ್ತೆ ದಾಟುತ್ತಿದ್ದ ಯುವಕನಿಗೆ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತ ಯುವಕನನ್ನು ಕೋಳಿವಾಡ ಗ್ರಾಮದ 23 ವರ್ಷದ ಸಲೀಂ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಯುವಕ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಪಘಾತ ಎಸಗಿ ಪರಾರಿಯಾದ ವಾಹನ ಹಾಗೂ ಚಾಲಕನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

