
ಧಾರವಾಡ, ಸೆಪ್ಟೆಂಬರ್ 21: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಸೆಪ್ಟೆಂಬರ್ 23ರ ಸೋಮವಾರದಂದು ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.
ಗಣ್ಯರ ಉಪಸ್ಥಿತಿ
ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಗೌರವ ಉಪಸ್ಥಿತಿ ವಹಿಸಲಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹಮದ್, ಶಾಸಕರಾದ ವಿನಯ್ ಕುಲಕರ್ಣಿ, ಅಬ್ಬಯ್ಯ ಪ್ರಸಾದ್, ಭರಮಗೌಡ ಅಲಗೌಡ ಕಾಗೆ, ಜೆ.ಎನ್.ಗಣೇಶ್ ಮತ್ತು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷ ಸೈಯದ್ ಅಜೀಂಪೀರ್ ಎಸ್. ಖಾದ್ರಿ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು.
ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳು
ಶಾಸಕರಾದ ಎನ್.ಎಚ್. ಕೋನರಡ್ಡಿ, ಎಸ್.ವಿ. ಸಂಕನೂರ, ಪ್ರದೀಪ್ ಶೆಟ್ಟರ್, ಮಹೇಶ್ ತೆಂಗಿನಕಾಯಿ, ಎಂ.ಆರ್. ಪಾಟೀಲ್, ಎಫ್.ಎಚ್. ಜಕ್ಕಪ್ಪನವರ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ್ ಅಪ್ಪಾಸಿ ಬಬಲೇಶ್ವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಹಾಪೌರ ಜ್ಯೋತಿ ಪಾಟೀಲ್, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ, ಹಾಗೂ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಬೆಂಗಳೂರು ಆಯುಷ್ ಇಲಾಖೆ ಆಯುಕ್ತ ವಿಪಿನ್ ಸಿಂಗ್, ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ್ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ್ ಘಾಳಿ, ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಂ. ಹೊನಕೇರಿ ಅವರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಗಣೇಶ ಎಸ್. ಕಬಾಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

