ಕುಂದಗೋಳ: ಸಂವಿಧಾನದ ನಾಲ್ಕನೇ ಅಂಗವಾದ ಪತ್ರಿಕಾರಂಗಕ್ಕೆ ಸರ್ಕಾರದ ಕಿವಿ ಹಿಂಡಿ ತಪ್ಪುಗಳನ್ನು ತಿದ್ದುವ ಶಕ್ತಿಯಿದೆ ಎಂದು ಶಾಸಕ ಎಂ.ಆರ್. ಪಾಟೀಲ್ ಅವರು ಹೇಳಿದರು.
ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ ಘೋರ್ಪಡೆ ಅವರನ್ನು ಶಾಸಕರ ನಿವಾಸದಲ್ಲಿ ಶಾಸಕರು ಹಾಗೂ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ಪತ್ರಕರ್ತರು ಕೇವಲ ಸುದ್ದಿಯನ್ನು ನೀಡುವವರಾಗದೆ, ವಸ್ತುನಿಷ್ಠ ವರದಿಗಳ ಮೂಲಕ ಸಮಾಜದಲ್ಲಿರುವ ಅಂಕುಡೊಂಕುಗಳನ್ನು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನಸಾಮಾನ್ಯರ ಧ್ವನಿಯಾಗಿ ಕೆಲಸ ಮಾಡುವ ಮೂಲಕ ಸಮಾಜದ ಹಿತದೃಷ್ಟಿಯಿಂದ ಪತ್ರಿಕಾ ಧರ್ಮವನ್ನು ಎತ್ತಿ ಹಿಡಿಯಬೇಕು ಎಂದು ಅವರು ಕಿವಿಮಾತು ಹೇಳಿದರು. ನೂತನವಾಗಿ ಆಯ್ಕೆಯಾದ ಅಶೋಕ ಘೋರ್ಪಡೆ ಅವರ ಅವಧಿಯಲ್ಲಿ ಪತ್ರಕರ್ತರ ಸಂಘವು ಮತ್ತಷ್ಟು ಕ್ರಿಯಾಶೀಲವಾಗಿ ಕೆಲಸ ಮಾಡಲಿ ಎಂದು ಅವರು ಇದೇ ವೇಳೆ ಹಾರೈಸಿದರು.
ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ಕಿರಣ ಅರಮನೆ, ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ವಾಗೀಶ ಗಂಗಾಯಿ, ಗಣೇಶ ಕೊಕಾಟೆ ಉಪಸ್ಥಿತರಿದ್ದರು. ಅಲ್ಲದೆ ಎಂ.ಆರ್. ಪಾಟೀಲ್ ಅಭಿಮಾನಿ ಸಂಘದ ಪದಾಧಿಕಾರಿಗಳಾದ ಸತೀಶ ಪಾಟೀಲ್, ಹರೀಶ ಕೊನೇರಿ, ಪ್ರದೀಪ ಕಾಳೆ, ರಮೇಶ ಗದುಗಿನ, ಸಿದ್ದು ಧಾರವಾಡಶೆಟ್ಟರ್ ಹಾಗೂ ಗಿರೀಶ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.