
ಕಾರ್ಕಳ: ಇಲ್ಲಿನ ಕುಂಟಲಪಾಡಿ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂಬವರನ್ನು ಇರಿದು ಕೊಲೆ ಮಾಡಲಾಗಿದೆ. ಈ ಘಟನೆ ಮಂಗಳವಾರ (ಆ.26) ಬೆಳಕಿಗೆ ಬಂದಿದೆ.
ಘಟನಾ ವಿವರ
ಕೊಲೆಯಾದ ನವೀನ್ ಪೂಜಾರಿ ಕಾರ್ಕಳದಲ್ಲಿ ನೆಲೆಸಿದ್ದು, ಹಣಕಾಸು ವ್ಯವಹಾರ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಕಾರ್ಕಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಕೊಲೆಯ ಹಿಂದಿನ ನಿಖರ ಕಾರಣ ಮತ್ತು ಆರೋಪಿಗಳ ಪತ್ತೆಗಾಗಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ.

