
ಧಾರವಾಡ: ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಅಕ್ಟೋಬರ್ 5ರಂದು ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಬಸವರಾಜ ಕೊಟಗಿ ಅವರು ಪಕ್ಷೇತರ ಅಭ್ಯರ್ಥಿಯಾಗಿ, ಮೋಹನ ಲಿಂಬಿಕಾಯಿ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ, ನಿಶಾಂತ ಬಂಕಾಪೂರ ಅವರು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಜಿಶಾನ ಸಿರಸಂಗಿ ಹಾಗೂ ಕಾಂತಕುಮಾರ್ ಆರ್. ಅವರು ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಇದರೊಂದಿಗೆ ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದಿಂದ ಇದುವರೆಗೆ ಒಟ್ಟು 8 ಅಭ್ಯರ್ಥಿಗಳಿಂದ 14 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಹಾಗೂ ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣಾಧಿಕಾರಿ ಕೆ.ಎಂ. ಜಾನಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

